ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್: ಪಬ್ ಮತ್ತು ಕ್ಲಬ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಅನುಮತಿ!

ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಬೆನ್ನಲ್ಲೇ ಭರ್ಜರಿ ಆದಾಯ ಬರುತ್ತಿದ್ದು ಇದರ ಜೊತೆಗೆ ಇದೀಗ ಪಬ್ ಮತ್ತು ಕ್ಲಬ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದೆ. 
ಮದ್ಯ
ಮದ್ಯ

ಬೆಂಗಳೂರು: ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಬೆನ್ನಲ್ಲೇ ಭರ್ಜರಿ ಆದಾಯ ಬರುತ್ತಿದ್ದು ಇದರ ಜೊತೆಗೆ ಇದೀಗ ಪಬ್ ಮತ್ತು ಕ್ಲಬ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದೆ. 

ಎಂಎಸ್ಐಎಲ್ ಗಳಲ್ಲಿ ಮೊದಲಿಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಇದೀಗ ಪಬ್ ಮತ್ತು ಕ್ಲಬ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ ಎಂದು ಅಬಕಾರಿ ಸಚಿವ ಹೆಚ್ ನಾಗೇಶ್ ತಿಳಿಸಿದ್ದಾರೆ. 

ನಾಳೆಯಿಂದ ರಾಜ್ಯಾದ್ಯಂತ ಪಬ್ ಮತ್ತು ಕ್ಲಬ್, ಎಲ್ಲಾ ಮದ್ಯದಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ ಕಂಡಿಷನ್ಸ್ ಹಾಕಿದ್ದು, ಎಂಆರ್ ಪಿ ಬೆಲೆಯಲ್ಲೇ ಮಾರಬೇಕು. 

ಇಲ್ಲದಿದ್ದರೆ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ಮಾತ್ರ ಮಾರಾಟ ಮಾಡಬೇಕು ಎಂದು ಹೇಳಿದ್ದಾರೆ. 

ವರ್ಷಕ್ಕೆ ಅಬಕಾರಿ ಆದಾಯ ಸರ್ಕಾರಕ್ಕೆ 25 ಸಾವಿರ ಕೋಟಿ ಬರಲಿದೆ. ಈ ವರ್ಷ 2500 ಕೋಟಿ ಹೆಚ್ಚಾಗಲಿದೆ. 22,500 ಕೋಟಿ ಆದಾಯಕ್ಕೆ ಹೆಚ್ಚುವರಿಯಾಗಿ 2500 ಕೋಟಿ ಸಿಗಲಿದೆ ಎಂದು ನಾಗೇಶ್ ಹೇಳಿದರು.

ಸುಪ್ರೀಂ ಕೋರ್ಟ್‌ ನೀಡಿದ ಆದೇಶ ನೋಡಿಲ್ಲ. ಆನ್ ಲೈನ್ ಮಾರಾಟಕ್ಕೆ ಅವಕಾಶ ನೀಡಿದರೆ ತಪ್ಪಿಲ್ಲ. ಮೊದಲಿಂದಲೂ ಆ ಬಗ್ಗೆ ಚರ್ಚೆ ಇತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com