ಟೋಲ್ ಶುಲ್ಕ ಮನ್ನಾ ಮಾಡಿ: ಸಿಎಂ ಯಡಿಯೂರಪ್ಪಗೆ ರೈತರ ಮನವಿ
ಬೆಂಗಳೂರು: ಲಾಕ್‌ಡೌನ್ ಪರಿಣಾಮವಾಗಿ ಈಗಾಗಲೇ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಮೇಲಾಗಿ ಅವರ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಸಾಗಾಣಿಕೆಯ ಅಡಚಣೆಗಳಿಂದಾಗಿ ಬೇಕಾ ಬಿಟ್ಟಿ ಬೆಲೆಗಳಿಗೆ ಉತ್ಪನ್ನ ಮಾರಾಟ ಮಾಡುವಂತಾಗಿದೆ ಹಾಗಾಗಿ ಟೋಲ್ ಶುಲ್ಕ ಮನ್ನಾ ಮಾಡಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಗಳು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಕೊರೊನಾ ಲಾಕ್‌ಡೌನ್ ಪರಿಣಾಮ ರೈತರು ಸಾಕಷ್ಟು ಸಂಕಷ್ಟ ಅನುಭವಿಸಿದ್ದು ಅವರಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗುರುವಾರ ರೈತ ಮುಖಂಡರ ಜೊತೆಗೆ ಸಭೆಯನ್ನು ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ರೈತರ ಸಮಸ್ಯೆಗಳನ್ನು ಸಿಎಂ ಆಲಿಸಿದರು.
ಸ್ಟೋರೇಜ್ ಕೊರತೆಯಿಂದಾಗಿ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾದರೆ ಸಂಗ್ರಹಿಸಿಟ್ಟುಕೊಳ್ಳಲೂ ಸಾಧ್ಯವಾದರೆ ಅನಿವಾರ್ಯವಾಗಿ ನಾಶ ಮಾಡುವಂತಹ ಪರಿಸ್ಥಿತಿಗೆ ಬಂದಿದ್ದಾರೆ.
ಈ ನಿಟ್ಟಿನಲ್ಲಿ ರೈತರಿಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕು ಎಂಬ ಒತ್ತಾಯಗಳು ಕೇಳಿ ಬರುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ 1,610 ಕೋಟಿಯ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಿದ್ದು ಹೂ ಬೆಳೆಗಾರರಿಗೆ ಪರಿಹಾರ ಘೋಷಣೆ ಮಾಡಿದೆ.
ಅದರಂತೆ ಹಣ್ಣು, ತರಕಾರಿ ಬೆಳೆಗಾರರಿಗೆ ಪರಿಹಾರ ನೀಡುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ರೈತ ಮುಖಂಡರ ಜೊತೆಗೆ ಸಭೆಯನ್ನು ನಡೆಸಿದರು
ಕೋವಿಡ್-19 ಹಾಗೂ ಲಾಕ್‌ಡೌನ್ ಪರಿಣಾಮ ಸಂಕಷ್ಟದಲ್ಲಿರುವ ರೈತರು ತಮ್ಮ ತಮ್ಮ ಕೃಷಿ ಉತ್ಪನ್ನಗಳನ್ನು ಸಾಗಾಣಿಕೆ ಮಾಡುವಾಗ ಅವರಿಗೆ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡುವ ಬಗ್ಗೆ ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ. ವಿಚಾರಣೆ ವೇಳೆ ರಾಷ್ಟ್ರೀಯ ಹೆದ್ದಾರಿ
ಪ್ರಾಧಿಕಾರದ ಪರ ವಕೀಲರು ವಾದ ಮಂಡಿಸಿ ಟೋಲ್ ಶುಲ್ಕ ವಿನಾಯಿತಿ ಕುರಿತು ಕಾನೂನಿನಲ್ಲಿರುವ ಅವಕಾಶಗಳ ಬಗ್ಗೆ ನ್ಯಾಯಪೀಠಕ್ಕೆ ತಿಳಿಸಿದರು..