ರಾಜ್ಯ

ರಾಜ್ಯಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ ಬರೋಬ್ಬರಿ 53 ಮಂದಿಯಲ್ಲಿ ಸೋಂಕು ಪತ್ತೆ, 847ಕ್ಕೇರಿದ ಸೋಂಕಿತರ ಸಂಖ್ಯೆ

ರಾಜ್ಯಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ ಬರೋಬ್ಬರಿ 53 ಮಂದಿಯಲ್ಲಿ ಸೋಂಕು ಪತ್ತೆ, 847ಕ್ಕೇರಿದ ಸೋಂಕಿತರ ಸಂಖ್ಯೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 53 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಮಾಹಿತಿ ನೀಡಿದೆ. 

ರಾಜ್ಯದಲ್ಲಿ ಕೇವಲ ಅರ್ಧ ದಿನದಲ್ಲಿ 53 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ಕೊರೋನಾ ಸೋಂಕು ಪತ್ತೆಯಾದ ನಂತರ ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ.

ಬೆಂಗಳೂರು ನಗರ 3, ಬೆಳಗಾವಿ 22, ಉತ್ತರ ಕನ್ನಡ 7, ಚಿಕ್ಕಬಳ್ಳಾಪುರ, ದಾವಣಗೆರೆ ತಲಾ 1, ಕಲಬುರಗಿ 3, ಶಿವಮೊಗ್ಗ 8, ಬಾಗಲಕೋಟೆಯಲ್ಲಿ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

ಜೊತೆಗೆ, ಶನಿವಾರ ಸಂಜೆ ಬೆಂಗಳೂರು ನಗರ ನಿವಾಸಿಯಾಗಿದ್ದ 56 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ.ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೇರಿಕೆಯಾಗಿದೆ. ಇಲ್ಲಿಯವರೆಗೆ 32 ಜನರು ಮೃತಪಟ್ಟಿದ್ದು, 405 ಮಂದಿ ಗುಣಮುಖರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.