ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 4ನೇ ಬಾರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ ಮತ್ತು ಸೆಂಟ್ರಲ್ ಏಷ್ಯಾ ವಲಯದಲ್ಲಿ 2020ರ ವಿಶ್ವ ವಿಮಾನ ನಿಲ್ದಾಣ ಪ್ರಶಸ್ತಿ ವಿಭಾಗದಲ್ಲಿ ಈ ಪುರಸ್ಕಾರಕ್ಕೆ ಪಾತ್ರವಾಗಿ ಮಹತ್ವದ ಸಾಧನೆ ಮಾಡಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ  (ಸಂಗ್ರಹ ಚಿತ್ರ)
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ ಮತ್ತು ಸೆಂಟ್ರಲ್ ಏಷ್ಯಾ ವಲಯದಲ್ಲಿ 2020ರ ವಿಶ್ವ ವಿಮಾನ ನಿಲ್ದಾಣ ಪ್ರಶಸ್ತಿ ವಿಭಾಗದಲ್ಲಿ ಈ ಪುರಸ್ಕಾರಕ್ಕೆ ಪಾತ್ರವಾಗಿ ಮಹತ್ವದ ಸಾಧನೆ ಮಾಡಿದೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಪ್ರಮಾಣದ ಗ್ರಾಹಕರು ಮತ ಹಾಕಿ ನಾಲ್ಕನೇ ಬಾರಿಗೆ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, 11 ವರ್ಷಗಳ ಈ ವಿಮಾನ ನಿಲ್ದಾಣಕ್ಕೆ ಈಗಾಗಲೇ ಹಲವಾರು ಪ್ರಶಸ್ತಿ, ಪುರಸ್ಕಾರಗಳು ದೊರೆತಿವೆ. ಅತಿ ಹೆಚ್ಚು ಮಂದಿ ಪ್ರಯಾಣಿಸುವ ವಿಮಾನ ನಿಲ್ದಾಣ ಎಂಬ ಶ್ರೇಯಕ್ಕೂ ಪಾತ್ರವಾಗಿದೆ.

ಪ್ರಶಸ್ತಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕೈಟ್ರಾಕ್ಸ್ ನ ಮುಖ್ಯ ಕಾರ್ಯನಿರ್ವಾಹಕ ಎಡ್ವರ್ಡ್ ಪ್ಲೈಸ್ಟೆಡ್ ಪ್ರಶಸ್ತಿ ಪ್ರಕಟಿಸಿದ್ದು,. ಭಾರತ ಜಾಗತಿಕ ವಾಯುಯಾನ ಕ್ಷೇತ್ರದಲ್ಲಿ ಮಹತ್ವದ ಸಾಧನೆಯತ್ತ ದಾಪುಗಾಲಿಟ್ಟಿದ್ದು, ಗ್ರಾಹಕರಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಮೂಲಕ ಕೆಂಪೇಗೌಡ ವಿಮಾನ ನಿಲ್ದಾಣ ಯಶಸ್ಸಿನ ಹಾದಿಯಲ್ಲಿ ಸಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com