ಯಾವುದೇ ಹುದ್ದೆ ನೀಡದೆ ಐಎಎಸ್ ಐಧಿಕಾರಿ ಮಣಿವಣ್ಣನ್ ಎತ್ತಂಗಡಿ

ಕಾರ್ಮಿಕ ಇಲಾಖೆ ಮತ್ತು ವಾರ್ತಾ ಇಲಾಖೆಯಿಂದ ಪಿ.ಮಣಿವಣ್ಣನ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅವರ ಜಾಗಕ್ಕೆ ಹಿರಿಯ ಐಎಎಸ್ ಅಧಿಕಾರಿ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಮಣಿವಣ್ಣನ್
ಮಣಿವಣ್ಣನ್
Updated on

ಬೆಂಗಳೂರು: ಕಾರ್ಮಿಕ ಇಲಾಖೆ ಮತ್ತು ವಾರ್ತಾ ಇಲಾಖೆಯಿಂದ ಪಿ.ಮಣಿವಣ್ಣನ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅವರ ಜಾಗಕ್ಕೆ ಹಿರಿಯ ಐಎಎಸ್ ಅಧಿಕಾರಿ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಎಂ.‌ಮಹೇಶ್ವರ್ ರಾವ್ ರನ್ನು ಈ‌ ಎರಡು ಇಲಾಖೆಯ ಪ್ರಧಾ‌ನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. 

ಕೋವಿಡ್ ಲಾಕ್ಡೌನ್ ಸಂತ್ರಸ್ತರಿಗೆ ಪರಿಹಾರವನ್ನು ಪರಿಣಾಮಕಾರಿಯಾಗಿ ಮುಂದುವರಿಸಲು ಶ್ರೀ ಮಣಿವಣ್ಣನ್ ವರ್ಗಾವಣೆಯನ್ನು ಕೂಡಲೆ ರದ್ದುಪಡಿಸಿ ಕಾಮಿ೯ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನೇ ಮುಂದುವರಿಸಬೇಕೆಂದು ಒತ್ತಾಯಿಸಲಾಗಿದೆ.

ಆದರೆ, ಈ ವರೆಗೆ ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾ‌ನ ಕಾರ್ಯದರ್ಶಿಯಾಗಿದ್ದ ಮಣಿವಣ್ಣನ್ ರನ್ನು ವರ್ಗಾವಣೆ ಮಾಡಲಾಗಿದೆಯಾದರೂ, ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಸರ್ಕಾರದ ಈ ನಡೆ ಸಾಮಾನ್ಯವಾಗಿ ಅಚ್ಚರಿಗೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com