ಕೈಗಾರಿಕಾ ವಲಯಕ್ಕೆ ಮೂರು ಲಕ್ಷ ಕೋಟಿ ಆರ್ಥಿಕ ನೆರವು ಸ್ವಾಗತಾರ್ಹ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಕೈಗಾರಿಕಾ ವಲಯಕ್ಕೆ ಕೇಂದ್ರ ಸರ್ಕಾರ 3 ಲಕ್ಷ ಕೋಟಿ ಆರ್ಥಿಕ ನೆರವು ನೀಡಿರುವುದನ್ನು ಸಿಎಂ ಯಡಿಯೂರಪ್ಪ ಸ್ವಾಗತಿಸಿದ್ದಾರೆ. 
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Updated on

ಬೆಂಗಳೂರು: ಕೈಗಾರಿಕಾ ವಲಯಕ್ಕೆ ಕೇಂದ್ರ ಸರ್ಕಾರ 3 ಲಕ್ಷ ಕೋಟಿ ಆರ್ಥಿಕ ನೆರವು ನೀಡಿರುವುದನ್ನು ಸಿಎಂ ಯಡಿಯೂರಪ್ಪ ಸ್ವಾಗತಿಸಿದ್ದಾರೆ. 

ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

"ನಿನ್ನೆ  ಪ್ರಧಾನಿಯವರು ಆರ್ಥಿಕ ಪುನಶ್ಚೇತನಕ್ಕಾಗಿ 20 ಲಕ್ಷ ಕೋಟಿಗಳ ಪ್ಯಾಕೇಜ್ ಘೋಷಿಸಿದ್ದರು. ಇದಕ್ಕೆ  ಅನುಗುಣವಾಗಿ ಇಂದು ಸಚಿವೆ ನಿರ್ಮಲಾ ಸೀತಾರಾಮನ್ ರವರು ಮೂರು ಲಕ್ಷ ಕೋಟಿ ಹಣಕಾಸು ನೆರವನ್ನು ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಸಹಾಯ ಹಸ್ತ ಚಾಚಿದ್ದು ಶ್ಲಾಘನೀಯ. ಮೂರು ಲಕ್ಷ ಕೋಟಿ ಹಣಕಾಸು ಸಹಾಯ ಕೇವಲ ಆರ್ಥಿಕ ಸಹಾಯವಾಗಿರದೆ ದೇಶದ ಉದ್ಯಮಿಗಳಿಗೆ ಮತ್ತು ಕಾರ್ಮಿಕ ವರ್ಗಕ್ಕೆ ಆರ್ಥಿಕವಾಗಿ ಪುನಶ್ಚೇತನಗೊಳ್ಳುವಲ್ಲಿ ವರದಾನವಾಗಲಿದೆ ಎಂದು ಸಿಎಂ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. 

ಇಂದಿನ ಆರ್ಥಿಕ ಪುನಶ್ಚೇತನ, ಸಮಯೋಚಿತ ಮತ್ತು ವೈಜ್ಞಾನಿಕವಾಗಿದ್ದು, ಬಹಳ ಆರ್ಥಿಕ ನೈಪುಣ್ಯತೆಯಿಂದ ಕೂಡಿದ್ದು,   ಎಂ.ಎಸ್.ಎಂ.ಇ.ಗಳಿಗೆ ಯಾವುದೇ ಗ್ಯಾರಂಟಿ ಇಲ್ಲದೆ ಸಾಲ ಯೋಜನೆ ಘೋಷಣೆ ತಕ್ಷಣ ಕೈಗಾರಿಕೆಗಳನ್ನು ಪುನರಾರಂಭಿಸಲು ಉತ್ತೇಜನಕಾರಿಯಾಗಿ ಪರಿಣಮಿಸುತ್ತದೆ.

ಈ ಹಣಕಾಸು ನೆರವು ದೇಶದ 45 ಲಕ್ಷ ಎಂ.ಎಸ್.ಎಂ.ಇ. (MSME) ಗಳಿಗೆ ಲಾಭವಾಗಲಿದೆ.  ಇದರ ಜೊತೆಗೆ ರಾಜ್ಯದ ವಿದ್ಯುತ್ ಕಂಪನಿಗಳಿಗೆ 90 ಸಾವಿರ ಕೋಟಿ ಧನ ಸಹಾಯ, 50 ಸಾವಿರ ಕೋಟಿ ಆದಾಯ ತೆರಿಗೆ ಬಾಕಿ ವಾಪಾಸ್ ಮತ್ತು ತೆರಿಗೆ ವಿನಾಯಿತಿ, 6750 ಕೋಟಿ ರೂ ನೌಕರದಾರರ ಭವಿಷ್ಯ ನಿಧಿಗೆ ನೌಕರದಾರರ ಮತ್ತು ಉದ್ಯಮಿಗಳ ವಂತಿಗೆ ಪಾವತಿ ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ 30 ಸಾವಿರ ಕೋಟಿ ಹಣಕಾಸು ಸಹಾಯ ಇವುಗಳು ಕೋವಿಡ್-19ರಿಂದ ತತ್ತರಿಸಿದ ಔದ್ಯೋಗಿಕ ವಲಯಕ್ಕೆ ಸಂಜೀವಿನಿಯಾಗಿ ಪರಿಣಮಿಸಲಿದೆ ಎಂದು ಸಿಎಂ ಹೇಳಿದ್ದಾರೆ.

ಇವತ್ತಿನ ವಿಶೇಷತೆ ಏನೆಂದರೆ, 200 ಕೋಟಿ ವರೆಗಿನ ಟೆಂಡರ್ ಪ್ರಕ್ರಿಯೆಯಲ್ಲಿ ಭಾರತೀಯ ಕಂಪನಿಗಳಿಗೆ ಮತ್ತು ಗುತ್ತಿಗೆದಾರರಿಗೆ ಮಾತ್ರ ಭಾಗವಹಿಸಲು ಅನುವು ಮಾಡಿಕೊಟ್ಟಿದ್ದು ಸ್ವದೇಶಿ ಕಂಪನಿಗಳು ಬೆಳೆಯುವಲ್ಲಿ ದೊಡ್ಡ ಪ್ರೇರಕ ಯೋಜನೆಯಾಗಲಿದೆ.

ಕೋವಿಡ್-19ರಿಂದ ತತ್ತರಿಸಿದ ಜಗತ್ತಿನ ಯಾವುದೇ ದೇಶ ಔದ್ಯೋಗಿಕ ವಲಯಕ್ಕೆ ಇಂತಹ ಆರ್ಥಿಕ ಪುನಶ್ಚೇತನ ಕಾರ್ಯಕ್ರಮವನ್ನು ಘೋಷಿಸಿಲ್ಲ ಎಂದರೆ ಅತಿಶಯೋಕ್ತಿಯಲ್ಲ.  ಲಾಕ್ ಡೌನ್ ವ್ಯವಸ್ಥೆಯಿಂದ ಹೊರಬಂದು ಜನತೆ ತಮ್ಮ ತಮ್ಮ ದಿನನಿತ್ಯದ ದುಡಿಮೆಯನ್ನು ಪ್ರಾರಂಭಿಸಲು ಪ್ರೇರೇಪಿಸಿದ ಮೊದಲ ದಿಟ್ಟ ಹೆಜ್ಜೆ ಇದಾಗಿದೆ ಎಂದು ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com