ರಾಮನಗರ: ಮಗುವನ್ನು ಕೊಂದಿದ್ದ ಚಿರತೆ ಸೆರೆ

ರಾಮನಗರ: ಮಗುವನ್ನು ಕೊಂದಿದ್ದ ಚಿರತೆ ಸೆರೆ

ಪೋಷಕರ ಜತೆ ಮಲಗಿದ್ದ ಮೂರು ವರ್ಷದ ಮಗುವನ್ನು ಹೊತ್ತೊಯ್ದು ಕೊಂದು ಹಾಕಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಮಾಗಡಿ ತಾಲೂಕಿನ ಕದಿರಯ್ಯನ ಪಾಳ್ಯದಲ್ಲಿ ಈ ನರಭಕ್ಷಕ ಚಿರತೆ ಸೆರೆಯಾಗಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. 

ರಾಮನಗರ: ಪೋಷಕರ ಜತೆ ಮಲಗಿದ್ದ ಮೂರು ವರ್ಷದ ಮಗುವನ್ನು ಹೊತ್ತೊಯ್ದು ಕೊಂದು ಹಾಕಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಮಾಗಡಿ ತಾಲೂಕಿನ ಕದಿರಯ್ಯನ ಪಾಳ್ಯದಲ್ಲಿ ಈ ನರಭಕ್ಷಕ ಚಿರತೆ ಸೆರೆಯಾಗಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಮೂರು ವರ್ಷದ ಹೇಮಂತ್ ನನ್ನು ಮನೆಯಿಂದ ಹೊತ್ತೊಯ್ದು ಕೊಂದಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿನಲ್ಲಿ ಸೆರೆಯಾಗಿದೆ. ಅರಣ್ಯ ಇಲಾಖೆಯವರು ಕದರಯ್ಯನಪಾಳ್ಯದ ಸುತ್ತ ಆರು ಕಡೆ ಬೋನ್ ಇರಿಸಿದ್ದರು.

ಇದೀಗ ಚಿರತೆ ಸೆರೆಯಾಗಿದ್ದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಿಕ್ಕಿರುವ ಚಿರತೆಯನ್ನು ಅರಣ್ಯಕ್ಕೆ ರವಾನಿಸಲು ಅಥವಾ ಮೈಸೂರು, ಬನ್ನೇರುಘಟ್ಟ ಮೃಗಾಲಯಕ್ಕೆ ಕಳಿಸಲು ಮುಂದಿನ ದಿನಗಳಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಇಲಾಖೆ ಮೂಲಗಳು ಹೇಳಿದೆ.

ಕಳೆದ ಶುಕ್ರವಾರ ರಾತ್ರಿ  ಕದಿರಯ್ಯನಪಾಳ್ಯಗ್ರಾಮದ ಚಂದ್ರಣ್ಣ ಹಾಗೂ ಮಂಗಳಗೌರಮ್ಮ ದಂಪತಿಯ ಮಗನಾದ ಹೇಮಂತ್ ಎಂಬ ಮಗುವನ್ನು ಚಿರತೆ ಹೊತ್ತೊಯ್ದು ಕೊಂದು ತಿಂದಿತ್ತು.

Related Stories

No stories found.

Advertisement

X
Kannada Prabha
www.kannadaprabha.com