ನಿಯಮ ಉಲ್ಲಂಘನೆಯಾಗದಂತೆ ಸಕ್ಕರೆ ಕಾರ್ಖಾನೆ ತೆರೆಯಲು ಅನುಮತಿ

ಸಕ್ಕರೆ ಕಾರ್ಖಾನೆ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಸಕ್ಕರೆ ಕಾರ್ಖಾನೆ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ಬಿಡುಗಡೆ ಮಾಡಿರುವ  ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಿಬ್ಬಂದಿಗೆ ಆರೋಗ್ಯ ತಸಾಪಣೆ, ಸೇರಿದಂತೆ ಹಲವು ನಿಯಮಗಳನ್ನು ಅನುಸರಿಸುವಂತೆ ಸೂಚಿಸಿ ಷರತ್ತು ಬದ್ದ ಅನುಮತಿನೀಡಿದೆ.

ಮಂಡ್ಯ, ಮೈಸೂರು ಭಾಗದ ಕಬ್ಬು ಬೆಳೆಗಾರರ ಕಾಯುವ ಸಲುವಾಗಿ  ಸಕ್ಕರೆ ಕಾರ್ಖಾನೆ ತೆರೆಯಲು ಅನುಮತಿ ನೀಡಲಾಗಿದೆ. ರೈತರಿಂದ ಕಬ್ಬು ಖರೀದಿಸುವಾಗಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿದೆ.

ಸಿಬ್ಬಂದಿಗೆ ಕಡ್ಡಾಯವಾಗಿ ಮಾಸ್ಕ್ , ಸೋಪು ಮತ್ತು ಸ್ಯಾನಿಟೈಸರ್ ನೀಡಬೇಕು ಮತ್ತು  ಸ್ಕ್ರೀನಿಂಗ್ ಮಾಡುವಂತೆ  ಜಿಲ್ಲಾಧಿಕಾರಿ ರವಿ ಸೂಚಿಸಿದ್ದಾರೆ. 

ಕಬ್ಬಿನ ಬೆಳೆಗಾರರ ಹಿತಾಸಕ್ತಿ ಕಾಪಾಡಲು ಕಾರ್ಖಾನೆ ಕ್ಯಾಲೆಂಡರ್ ಪ್ರಕಾರ ಸಂಗ್ರಹಣೆ ಮತ್ತು  ಕಬ್ಬು ಅರೆಯುವ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com