ಕೊಡಗಿನ ವಿರಾಜಪೇಟೆ ರಸ್ತೆ ಬದಿಯಲ್ಲೇ ಹುಲಿ ಪ್ರತ್ಯಕ್ಷ!

ಕೊಡಗಿನ ವಿರಾಜಪೇಟೆ ರಸ್ತೆ ಬದಿಯಲ್ಲಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಮಲಗಿರುವುದು ಕಂಡುಬಂದಿದ್ದು ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.
ವಿರಾಜಪೇಟೆ ರಸ್ತೆಯಲ್ಲಿ ಹುಲಿ
ವಿರಾಜಪೇಟೆ ರಸ್ತೆಯಲ್ಲಿ ಹುಲಿ
Updated on

ವಿರಾಜಪೇಟೆ: ಕೊಡಗಿನ ವಿರಾಜಪೇಟೆ ರಸ್ತೆ ಬದಿಯಲ್ಲಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಮಲಗಿರುವುದು ಕಂಡುಬಂದಿದ್ದು ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.

ವಿರಾಜಪೇಟೆ ತಾಲೂಕಿನ ಆನೆ ಚೌಕೂರು ಗೇಟ್ ಸಮೀಪ ಹುಲಿ ತನ್ನ ಮೂರು ಮರಿಗಳೊಂದಿಗೆ ಪ್ರತ್ಯಕ್ಷವಾಗಿದೆ. 

ಅರಣ್ಯ ವ್ಯಾಪ್ತಿಯ ರಸ್ತೆ ಬದಿಯಲ್ಲೇ ಹುಲಿ ಮಲಗಿರುವುದು ಕಂಡ ಸ್ಥಳೀಯರೊಬ್ಬರು ಈ ದೃಶ್ಯಗಳನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ನಾಗರಹೊಳೆ ರಾಷ್ಟ್ರೀಯ ಹುಲಿ ಸಂರಕ್ಷಣಾ ವಲಯದಿಂದ ಈ ಹುಲಿ ಕುಟುಂಬ ಬಂದಿರಬಹುದು ಎಂದು ಶಂಕಿಸಲಾಗಿದೆ. ಆತಂಕಗೊಂಡಿರುವ ಸ್ಥಳೀಯರು ಅರಣ್ಯ ಇಲಾಖೆಗೆ ಈ ಸಂಬಂಧ ಮಾಹಿತಿ ರವಾನಿಸಿದ್ದು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com