ಹೆಚ್ ಡಿ ಕುಮಾರಸ್ವಾಮಿ
ರಾಜ್ಯ
ಮಹಿಳೆಯರ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಚ್ಚುವ ಸರ್ಕಾರದ ನಿರ್ಧಾರ ವಿಪರ್ಯಾಸ: ಹೆಚ್.ಡಿ. ಕುಮಾರಸ್ವಾಮಿ
ಕಳೆದ ಎರಡು ದಶಕಗಳಿಂದ ಯಶಸ್ವಿಯಾಗಿ ನಡೆಯುತ್ತಿರುವ ಸಾಂತ್ವನ ಯೋಜನೆಯನ್ನು ಸರ್ಕಾರ ಮುಚ್ಚಲು ಹೊರಟಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.
ಬೆಂಗಳೂರು: ಕಳೆದ ಎರಡು ದಶಕಗಳಿಂದ ಯಶಸ್ವಿಯಾಗಿ ನಡೆಯುತ್ತಿರುವ ಸಾಂತ್ವನ ಯೋಜನೆಯನ್ನು ಸರ್ಕಾರ ಮುಚ್ಚಲು ಹೊರಟಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.
ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲು ಹೊರಟಿರುವುದು ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.
ಮದ್ಯದಂಗಡಿಗಳನ್ನು ತೆರೆದು ಲಾಕ್ ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಅವರು ಒತ್ತಾಯಿಸಿದ್ದಾರೆ.

