ಎಲ್ಲ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು: ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್

ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ನೌಕರರು ಇಂದಿನಿಂದ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಆದೇಶಿಸಿದ್ದಾರೆ.
ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್
ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ನೌಕರರು ಇಂದಿನಿಂದ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಆದೇಶಿಸಿದ್ದಾರೆ.

ಎಲ್ಲ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ ಮಂಡಳಿ ಕಚೇರಿಗಳಲ್ಲಿ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ, ಸಿಬ್ಬಂದಿ ಶೇಕಡಾ 100 ರಷ್ಟು ಹಾಜರಾತಿ ಇರಬೇಕು ಎಂದು ಅವರು ಸೋಮವಾರ ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ಲಾಕ್ ಡೌನ್ ನಿರ್ಬಂಧ ಜಾರಿಯಲ್ಲಿದ್ದ ಕಾರಣಕ್ಕೆ ಈವರೆಗೆ   ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಶೇ. 100 ಷ್ಟು ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು, ಉಳಿದ ಇಲಾಖೆಗಳ ಗ್ರೂಪ್ ಎ ಮತ್ತು ಬಿ ವೃಂದದ ಎಲ್ಲಾ ಅಧಿಕಾರಿಗಳು  ಮತ್ತು ಗ್ರೂಪ್ ಸಿ ಮತ್ತು ಡಿ ವೃಂದದ ಶೇ. 33 ರಷ್ಟು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ಸೂಚಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com