ಸಕ್ರಿಯ ಕೊರೋನಾ ಪ್ರಕರಣಗಳಲ್ಲಿ ಬೆಂಗಳೂರು ನಗರವನ್ನು ಮೀರಿಸಿದ ಮಂಡ್ಯ

ಬೆಂಗಳೂರು: ಸಕ್ಕರೆ ನಾಡು ಮಂಡ್ಯ ಜಿಲ್ಲೆ ಈಗ ಕೊರೋನಾ ವೈರಸ್ ಸೋಂಕಿತರಿಂದ ತತ್ತರಿಸಿದ್ದು, ಬೆಂಗಳೂರು ನಗರವನ್ನೂ ಮೀರಿಸಿ ಮೊದಲ ಸ್ಥಾನಕ್ಕೇರಿದೆ.
ಹೊರರಾಜ್ಯಗಳ ಕಾರ್ಮಿಕರನ್ನು ಮರಳಿ ಕರೆತರಲು ಸರ್ಕಾರ ಅನುಮತಿ ಕಲ್ಪಿಸಿದ ನಂತರ ಮಂಡ್ಯಕ್ಕೆ ಹಲವು ಮಂದಿ ಮುಂಬೈನಿಂದ ಆಗಮಿಸಿದ್ದು, ಅವರಲ್ಲಿ ಅನೇಕರಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 147ಕ್ಕೇರಿಕೆಯಾಗಿದೆ. ಇಲ್ಲಿಯವರೆಗೆ ಅತೀ ಹೆಚ್ಚು ಪ್ರಕರಣಗಳನ್ನು ಹೊಂದಿದ್ದ ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 117 ಇದೆ. ಆ ಮೂಲಕ ಮಂಡ್ಯ ಇದೀಗ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಅಗ್ರ ಸ್ಥಾನಕ್ಕೇರಿದೆ.
ಮಂಗಳವಾರ ಒಂದೇ ದಿನ ಮಂಡ್ಯಕ್ಕೆ ಮುಂಬೈನಿಂದ ಆಗಮಿಸಿದ 71 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಬುಧವಾರ ಇಲ್ಲಿಯವರೆಗೆ 8 ಜನರಲ್ಲಿ ಸೋಂಕು ವರದಿಯಾಗಿದೆ. ಬೆಂಗಳೂರು ನಗರದಲ್ಲಿ ಒಟ್ಟು 8 ಸಾವು ಸೇರಿ 250 ಸೋಂಕಿತರಿದ್ದಾರೆ. ಈ ಪೈಕಿ 124 ಮಂದಿ ಗುಣಮುಖರಾಗಿದ್ದಾರೆ. ಎರಡನೇ ಸ್ಥಾನದಲ್ಲಿರುವ ಮಂಡ್ಯ 168 ಒಟ್ಟು ಸೋಂಕಿತರನ್ನು ಹೊಂದಿದ್ದು, 21 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿ ಕಳೆದೊಂದು ವಾರದಿಂದ ಸೋಂಕು ಹೆಚ್ಚಳವಾಗಿರುವುದರಿಂದ ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲಬರಗಿ 134 ಸೋಂಕಿತರಿಂದ ಮೂರನೇ ಸ್ಥಾನದಲ್ಲಿದೆ. ಬೆಳಗಾವಿ 116, ದಾವಣಗೆರೆ 112 ಸ್ಥಾನಗಳಿಂದ ತಲಾ ನಾಲ್ಕು ಮತ್ತು ಐದನೇ ಸ್ಥಾನದಲ್ಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


