ರಾಜ್ಯ

ರಾಜ್ಯದಲ್ಲಿ ಕೊರೋನಾ 'ಮಹಾ' ಸ್ಫೋಟ: ಎಚ್ಚೆತ್ತ ಸರ್ಕಾರದಿಂದ ಮತ್ತಷ್ಟು ರಾಜ್ಯಗಳ ಪ್ರಯಾಣದ ಮೇಲೆ ನಿರ್ಬಂಧ?

ರಾಜ್ಯದಲ್ಲಿ ಕೊರೋನಾ 'ಮಹಾ' ಸ್ಫೋಟ: ಎಚ್ಚೆತ್ತ ಸರ್ಕಾರದಿಂದ ಮತ್ತಷ್ಟು ರಾಜ್ಯಗಳ ಪ್ರಯಾಣದ ಮೇಲೆ ನಿರ್ಬಂಧ?
ಮೆಜೆಸ್ಟಿಕ್'ಗೆ ಬಂದ ಪ್ರಯಾಣಿಕರ ಮಾಹಿತಿ ಸಂಗ್ರಹಿಸುತ್ತಿರುವ ಅಧಿಕಾರಿಗಳು
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಮಹಾಸ್ಫೋಟ ಆರಂಭವಾಗಿದ್ದು, ಸೋಮವಾರ ಶತಕದ ಗಡಿ ದಾಟಿ ದಾಖಲೆ ಮಾಡಿದ್ದ ಕೊರೋನಾ ವೈರಸ್ ಮಂಗಳವಾರ 149 ಸಂಖ್ಯೆ ಮುಟ್ಟುವ ಮೂಲಕ ಮತ್ತೆ ಹೊಸ ದಾಖಲೆ ಸೃಷ್ಟಿಸಿದೆ. ಹೊರ ರಾಜ್ಯ, ಹೊರದೇಶದಿಂದ ಆಗಮನ ಹೆಚ್ಚಳ ಹಾಗೂ ಸೋಂಕು ಪರೀಕ್ಷಾ ಪ್ರಮಾಣ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಇನ್ನು ಮುಂದೆ ಇದೇ ರೀತಿ ದಿನಕ್ಕೆ 100, 200ರ ರೀತಿಯಲ್ಲಿ ಸೋಂಕು ಪ್ರಕರಣಗಳು ಹೆಚ್ಚುವ ಭೀತಿ ಸೃಷ್ಟಿಯಾಗಿದೆ. 

ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ನಡುವಲ್ಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಇದೀಗ ಮತ್ತಷ್ಟು ಹೊರ ರಾಜ್ಯ ಹಾಗೂ ಹೊರ ದೇಶಗಳ ಪ್ರಯಾಣದ ಮೇಲೆ ಮತ್ತಷ್ಟು ನಿರ್ಬಂಧ ಹೇರಲು ಚಿಂತನೆ ನಡೆಸುತ್ತಿದೆ ಎಂದು ವರದಿಗಳಿಂದ ತಿಳಿದಬಂದಿದೆ. 

ಕೊರೋನಾ ವೈರಸ್ ಸೋಂಕು ನಿಗ್ರಹಿಸುವ ನಿಟ್ಟಿನಲ್ಲಿ ಈ ಹಿಂದೆ ರಾಜ್ಯ ಸರ್ಕಾರ ಮಹಾರಾಷ್ಟ್ರ, ಗುಜರಾತ್, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಜನತೆ ರಾಜ್ಯ ಪ್ರವೇಶಿಸದಂತೆ ನಿರ್ಬಂಧ ಹೇರಿತ್ತು. 

ಈ ಬೆಳವಣಿಗೆ ನಡುವಲ್ಲೇ ಸೋಂಕಿತರ ಸಂಖ್ಯೆ ಎಂದಿನಂತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಹೊರ ರಾಜ್ಯಗಳ ಪ್ರಯಾಣದ ಮೇಲೆ ನಿರ್ಬಂಧ ಹೇರಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಮಹಾರಾಷ್ಟ್ರದಲ್ಲಿ 35,058 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ತಮಿಳುನಾಡು 11,760, ಗುಜರಾತ್ 11,745 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅತೀ ಹೆಚ್ಚು ಸೋಂಕಿತರನ್ನು ಒಳಗೊಂಡಿರುವ ರಾಜ್ಯಗಳ ಪ್ರಯಾಣದ ಮೇಲೆ ನಿರ್ಬಂಧ ಹೇರಲಾಗಿದೆ. ಇತರೆ ರಾಜ್ಯಗಳಿಂದ ಹಿಂತಿರುವವರಿಂದಲೇ ಅತೀ ಹೆಚ್ಚು ಸೋಂಕು ಪತ್ತೆಯಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಮತ್ತಷ್ಟು ರಾಜ್ಯಗಳ ಪ್ರಯಾಣದ ಮೇಲೆ ನಿರ್ಬಂಧ ಹೇರಲು ಚಿಂತನೆ ನಡೆಸಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.