ದೇಶದ್ರೋಹ ಪ್ರಕರಣ: ಅಮೂಲ್ಯ ಲಿಯೋನಾ ಜಾಮೀನು ಅರ್ಜಿಗೆ ಪೊಲೀಸರ ವಿರೋಧ

ಪಾಕಿಸ್ತಾನ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಅಮೂಲ್ಯ ಲಿಯೋನಾ ಸಲ್ಲಿಸಿರುವ ಜಾಮೀನು ಅರ್ಜಿಗೆ ನಗರ ಪೊಲೀಸರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 
ಅಮೂಲ್ಯ ಲಿಯೋನಾ
ಅಮೂಲ್ಯ ಲಿಯೋನಾ

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಅಮೂಲ್ಯ ಲಿಯೋನಾ ಸಲ್ಲಿಸಿರುವ ಜಾಮೀನು ಅರ್ಜಿಗೆ ನಗರ ಪೊಲೀಸರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

ಜಾಮೀನು ಅರ್ಜಿ ಕುರಿತು ಸೋಮವಾರ ಆಕ್ಷೇಪಣಾ ಅರ್ಜಿ ಸಲ್ಲಿಸಿರುವ ಪೊಲೀಸರು, 19 ವರ್ಷದ ಯುವತಿ ಪ್ರಭಾವಶಾಲಿ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಆಕೆ ಬಿಡುಗಡೆಯಾಗಿದ್ದೇ ಆದರೆ, ಸಾಕ್ಷಿಗಳಿಗೆ ಬೆದರಿಕೆಯೊಡ್ಡಬಹುದು, ಇಲ್ಲವೇ ಪ್ರಭಾವ ಬೀರಬಹುದು, ದೇಶದಿಂದ ಪಲಾಯನ ಮಾಡುವ ಅವಕಾಶಗಳಿವೆ. ಹೀಗಾಗಿ ಜಾಮೀನು ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. 

ಕಳೆದ ಫೆ.22ರಂದು ರಾಷ್ಟ್ರೀಯ ನಾಗರಿಕ ನೋಂದಣಿ ಅಭಿಯಾನ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಅಮೂಲ್ಯ ಪಾಕಿಸ್ತಾನದ ಪರ ಘೋಷಣೆ ಕೂಗಿ ವಿವಾದಕ್ಕೀಡಾಗಿದ್ದರು. ಈ ಪ್ರಕರಣ ಸಂಬಂಧ ಆಕೆಯನ್ನು ಬಂಧಿಸಿದ ಉಪ್ಪಾರಪೇಟೆ ಠಾಣೆ ಪೊಲೀಸರು, ಬಳಿಕ ರಾಷ್ಟ್ರದ್ರೋಹದಡಿ ಪ್ರಕರಣ ದಾಖಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com