ಯಾದಗಿರಿ: ಉಸಿರಾಟ ತೊಂದರೆಯಿಂದ ಮಹಿಳೆ ಸಾವು, ಕೋವಿಡ್ ಪರೀಕ್ಷೆಗೆ ಮಾದರಿ ರವಾನೆ

ಯಾದಗಿರಿ: ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ ಅರಕೇರಾ(ಕೆ) ತಾಂಡಾದ 50 ವರ್ಷದ ಮಹಿಳೆಯ ಗಂಟಲು ದ್ರವದ ಮಾದರಿಯನ್ನು ಕೋವಿಡ್-19 ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಬೋರಬಂಡ ತಾಂಡಾ, ಪಸಪೂಲ್ ತಾಂಡಾ ಹಾಗೂ ಇನ್ನಿತರ ತಾಂಡಾಗಳ 24 ಜನರು ಮೇ 20ರಂದು ಮುಂಬೈನ ಚಂಬುರ್ ಭರತನಗರದಿಂದ ಯಾದಗಿರಿ ತಾಲ್ಲೂಕಿನ ಯರಗೋಳ ಚೆಕ್ ಪೋಸ್ಟ್ ಗೆ ವಾಹನದ ಮೂಲಕ ಆಗಮಿಸಿದ್ದಾರೆ. ಇವರನ್ನು ಚೆಕ್ ಪೋಸ್ಟ್ ನಲ್ಲಿ ಸ್ಕ್ರೀನಿಂಗ್ ಮಾಡುವಾಗ ಅರಕೇರಾ (ಕೆ) ತಾಂಡಾದ ಮಹಿಳೆ ತೀವ್ರ ಉಸಿರಾಟದಿಂದ ಬಳಲುತ್ತಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಕರ್ತವ್ಯನಿರತ ಯಾದಗಿರಿ ಎ.ಸಿ.ಎಫ್ ರವರು ಆಂಬ್ಯುಲೆನ್ಸ್ ಬರುವುದನ್ನು ಕಾಯದೇ ತುರ್ತಾಗಿ ತಮ್ಮ ವಾಹನದ ಮೂಲಕ ಹೊಸ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಕೆಲವೇ ನಿಮಿಷಗಳಲ್ಲಿ ಆ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆಯ ಗಂಟಲಿನ ದ್ರವದ ಮಾದರಿಯನ್ನು (ಸ್ವಾಬ್ ಸ್ಯಾಂಪಲ್) ಕೋವಿಡ್-19 ಪರೀಕ್ಷೆಗಾಗಿ ರವಾನಿಸಲಾಗಿದೆ. ಉಳಿದವರನ್ನು ಜ್ವರ ತಪಾಸಣಾ ಕೇಂದ್ರದಲ್ಲಿ ಸ್ಕ್ರೀನಿಂಗ್ ಮಾಡಿ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ನಿಗದಿತ ಇನ್ಸ್ಟಿಟ್ಯೂಶನಲ್ ಕ್ವಾರಂಟೈನ್ನಲ್ಲಿ ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲಾಡಳಿತವು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವುದರಿಂದ ಸಾರ್ವಜನಿಕರು ಆತಂಕ ಪಡಬಾರದು ಎಂದು ಅವರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


