ಸರ್ಕಾರಿ, ಖಾಸಗಿ ನೌಕರರಿಗೆ ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯ

ಕೊರೋನಾ ವೈರಸ್ ಹರಡುವಿಕೆ ನಿಯಂತ್ರಿಸಲು ಸರ್ಕಾರಿ ಹಾಗೂ ಖಾಸಗಿ ನೌಕರರು ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಬಳಕೆ ಮಾಡಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ವೈರಸ್ ಹರಡುವಿಕೆ ನಿಯಂತ್ರಿಸಲು ಸರ್ಕಾರಿ ಹಾಗೂ ಖಾಸಗಿ ನೌಕರರು ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಬಳಕೆ ಮಾಡಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಆರೋಗ್ಯ ಸೇತು ಆ್ಯಪ್ ಹೊಂದಿರುವ ನೌಕರರಿಗಷ್ಟೇ ಕಚೇರಿಯೊಳಗೆ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಇಲ್ಲದೇ ಹೋದರೆ, ಕಚೇರಿ ಪ್ರವೇಶಿಸಲು ಅನುಮತಿ ಇರುವುದಿಲ್ಲ. ಐಟಿ ವಲಯ ಸೇರಿದಂತೆ ಖಾಸಗಿ ಕಂಪನಿಗಳೂ ಕೂಡ ನೌಕರರಿಗೆ ಸೂಚನೆ ನೀಡಿದೆ ಎಂದು ಹೇಳಿದ್ದಾರೆ. 

ಮೇ.17 ರಂದು ಮಾರ್ಗಸೂಚಿಗಳನ್ನು ಬಿಡುಗೆಡ ಮಾಡಿದ್ದ ಗೃಹ ಸಚಿವಾಲಯ ಕಚೇರಿಗಳು ಹಾಗೂ ಕೆಲಸದ ಸ್ಥಳಗಳಲ್ಲಿ ಸುರಕ್ಷತೆ ಕಾಪಾಡುವ ಉದ್ದೇಶದಿಂದ, ನೌಕರರು ಹೊಂದಿಕೆಯಾಗುವಂತಹ ಮೊಬೈಲ್ ಫೋನ್ ಗಳಲ್ಲಿ ಆರೋಗ್ಯ ಸೇತು ಆ್ಯಪ್ ಗಳನ್ನು ಬಳಕೆ ಮಾಡಬೇಕು ಎಂದು ತಿಳಿಸಿತ್ತು. 

ಆ್ಯಪ್ ನಿಂದ ಮಾಹಿತಿಗಳು ಸೋರಿಕೆಯಾಗುತ್ತವೆ ಎಂಬ ಭೀತಿಯನ್ನು ಜನರು ಬಿಡಬೇಕು. ಆ್ಯಪ್ ಮೂಲಕ ಸೋಂಕಿತರನ್ನು ಕಂಡು ಹಿಡಿಯಲು ಈ ಆ್ಯಪ್ ಸಹಾಯ ಮಾಡಲಿದೆ ಎಂದಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com