ಲಾಕ್'ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯಕ್ಕೆ ಕೇಂದ್ರ ಸೂಚನೆ

ಲಾಕ್'ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬೆಂಗಳೂರು: ಲಾಕ್'ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. 

ಈ ಕುರಿತು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾ ಅವರು, ಲಾಕ್ಡೌನ್ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಪ್ರಮುಖವಾಗಿ ಕಂಟೈನ್ಮೆಂಟ್ ಝೋನ್ ಗಳಲ್ಲಿ ಕಠಿಣವಾಗಿರುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ಕೇಂದ್ರ ಜಾರಿಗೆ ತಂದಿರುವ ಮಾರ್ಗಸೂಚಿಗಳಲ್ಲಿ ನಿಯಮ ಉಲ್ಲಂಘನೆಗಳನ್ನು ಗೃಹ ಸಚಿವಾಲಯದ ಗಮನಕ್ಕೆ ತರಲಾಗುತ್ತದೆ. ನಿಯಮಗಲನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆಂದು ಹೇಳಲಾಗುತ್ತಿದೆ. 

ಕಂಟೈನ್ಮೆಟ್ ಝೋನ್ ಗಳಲ್ಲಿನ ಬೆಳವಣಿಗೆಗಳನ್ನು ಸಚಿವಾಲಯಕ್ಕೆ ವಿವರಿಸುವ ಅಗತ್ಯವಿದೆ. ಮತ್ತು ಈ ವಲಯಗಳಲ್ಲಿನ ಕಂಟೈನ್ಮೆಟ್ ಕ್ರಮಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವ ಅಗತ್ಯವಿದೆ. ಸೋಂಕು ಹರಡುವಿಕೆ ನಿಯಂತ್ರಿಸುವುದು ಕಡ್ಡಾಯವಾಗಿದ್ದು, ಸ್ಥಳೀಯ ಅಧಿಕಾರಿಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಬಸ್ಸು ಹಾಗೂ ಕಚೇರಿಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಪತ್ರದಲ್ಲಿ ತಿಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com