ಮಹಿಳೆಗೆ ಶಟಪ್ ರಾಸ್ಕಲ್ ಎಂದ ಮಾಧುಸ್ವಾಮಿ: ಸಚಿವರ ದುರ್ವರ್ತನೆಗೆ ಸಿಎಂ ವಾರ್ನಿಂಗ್; ರಾಜಿನಾಮೆಗೆ ವಿಪಕ್ಷಗಳ ಆಗ್ರಹ

ರೈತ ಮಹಿಳೆಗೆ ಅಶ್ಲೀಲವಾಗಿ ನಿಂದಿಸಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ವರ್ತನೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಸಚಿವರ ವರ್ತನೆಗೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಧುಸ್ವಾಮಿ
ಮಾಧುಸ್ವಾಮಿ

ಬೆಂಗಳೂರು: ರೈತ ಮಹಿಳೆಗೆ ಅಶ್ಲೀಲವಾಗಿ ನಿಂದಿಸಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ವರ್ತನೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಸಚಿವರ ವರ್ತನೆಗೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದ್ದು ಈ ರೀತಿ ಮಾತನಾಡಿದ್ದು ಸರಿಯಲ್ಲ ಎಂದಿದ್ದಾರೆ.

ಕೋಲಾರ ತಾಲೂಕಿನ ಎಸ್‌.ಅಗ್ರಹಾರ ಎಂಬಲ್ಲಿ ಕೆರೆ ವೀಕ್ಷಿಸಲು ಆಗಮಿಸಿದ್ದ ಸಚಿವ ಮಾಧುಸ್ವಾಮಿ ಅವರ ಬಳಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮಹಿಳಾ ಸದಸ್ಯರು ಕೆರೆ ಒತ್ತುವರಿ ತೆರವು ಸಂಬಂಧವಾಗಿ ಮನವಿ ಸಲ್ಲಿಸಲು ಬಂದಿದ್ದರು. ಸಮಸ್ಯೆಯನ್ನು ಸಚಿವರ ಗಮನಕ್ಕೆ ತರುವ ಸಂದರ್ಭದಲ್ಲಿ ಆಕ್ರೋಶಗೊಂಡ ಅವರು ಮಾತನಾಡುತ್ತಿದ್ದ ಮಹಿಳೆಯನ್ನು ತಡೆಯಲು ಯತ್ನಿಸಿದರು

ಈ ವೇಳೆ  ಕೋಪಗೊಂಡ  ಅವರು ಮಹಿಳೆಗೆ ರಾಸ್ಕಲ್‌ ಎಂಬ ಪದ ಬಳಸಿದ್ದಲ್ಲದೆ ಪೊಲೀಸರಿಗೆ ಅವರನ್ನು ಎಳೆದೊಯ್ಯುವಂತೆ ಹೇಳುವ ಮೂಲಕ ರೈತ ಮಹಿಳೆಯರನ್ನು ಅವಮಾನಿಸಿದ್ದರು. ಸಚಿವರ ಈ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ “ಸಚಿವರು ಈ ರೀತಿ ಮಾತನಾಡಿದ್ದು ಸಹಿಸಲು ಸಾಧ್ಯವಿಲ್ಲ. ನಾವು ಅವರಿಗೆ ಎಚ್ಚರಿಕೆ ನೀಡುತ್ತೇನೆ. ಈ ರೀತಿ ಅಶ್ಲೀಲವಾಗಿ ಮಾತನಾಡುವುದು ಸರಿಯಲ್ಲ. ನಾನು ರೈತ ಮಹಿಳೆ ಹಾಗೂ ಮಾಧುಸ್ವಾಮಿ ಜೊತೆಗೆ ಮಾತನಾಡುತ್ತೇನೆ. ಇನ್ನು ಮುಂದೆ ಈ ರೀತಿ ಆಗದಂತೆ ಕ್ರಮ ಕೈಗೊಳ್ಳುತ್ತೇನೆ” ಎಂದಿದ್ದಾರೆ.

ಹೆಣ್ಣು ಮಕ್ಕಳ ಮನಸ್ಸಿಗೆ ನೋವಾಗಿದ್ದರೆ, ನಾನು ಕ್ಷಮೆ ಕೇಳುತ್ತೇನೆ. ಆಕೆ ಹೆಣ್ಣು ಅಂತ ಆಗಲಿ ಅಥವಾ ರೈತ ಸಂಘದವರು ಎಂದು ಗುರುತಿಸಿ ಮಾತನಾಡಿಲ್ಲ. ವ್ಯಯಕ್ತಿಕವಾಗಿ ಮಿತಿ ಮೀರಿ ಮಾತನಾಡಿದ್ದಕ್ಕೆ ನಾನು ಪ್ರತಿಕ್ರಿಯಿಸಿದೆ. ನಾನು ಕೆಟ್ಟ ಪದ ಎಂದು ಹೇಳಿಲ್ಲ. ನೋವಾಗಿದ್ದರೆ ಕ್ಷಮೆ ಕೇಳುತ್ತೀನಿ ಎಂದು ಮಾಧುಸ್ವಾಮಿ ಹೇಳಿದರು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಹಿಳೆಯರನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಸಚಿವರು ಆ ರೈತ ಮಹಿಳೆಯ ಕ್ಷಮೆಯಾಚಿಸುವಂತೆ ಮುಖ್ಯಮಂತ್ರಿ ಸೂಚನೆ ಕೊಡಬೇಕು, ಸಂಪುಟದಿಂದ ಕೈಬಿಟ್ಟು ಸರಕಾರದ ಮಾನ ಉಳಿಸಬೇಕು ಎಂದು ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com