ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಮನೆಯ ದೃಶ್ಯ
ರಾಜ್ಯ
ಕಲಬುರಗಿ: ಗ್ಯಾಸ್ ಸಿಲಿಂಡರ್ ಸ್ಫೋಟ, ಒಬ್ಬ ಸಾವು, ಮೂವರಿಗೆ ಗಂಭೀರ ಗಾಯ
ನಸುಕಿನ ಜಾವ ಮನೆಯೊಂಡರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿ ಓರ್ವ ಸಾವನ್ನಪ್ಪಿದ್ದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿಯ ಸೇಡಂ ಪಟ್ಟಣದಲ್ಲಿ ನಡೆದಿದೆ.
ಕಲಬುರಗಿ: ನಸುಕಿನ ಜಾವ ಮನೆಯೊಂಡರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿ ಓರ್ವ ಸಾವನ್ನಪ್ಪಿದ್ದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿಯ ಸೇಡಂ ಪಟ್ಟಣದಲ್ಲಿ ನಡೆದಿದೆ.
ಮೊಮಿನಪುರಾ ಬಡಾವಣೆಯ ರಾಜು ತಾಯಿತ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು ರಾಜು ತಾಯಿತ್ (48) ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಕುಟುಂಬದ ಮೂವರು ಸದಸ್ಯರು ಗಂಭೀರ ಗಾಯಗೊಂಡಿದ್ದು ಗಾಯಾಳುಗಳನ್ನು ಕಲಬುರಗಿಯ ಜಿಲ್ಲಾ ಯುನೈಟೆಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಫೊಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು ಘಟನಾ ಸ್ಥಳಕ್ಕೆ ಸೇಡಂ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

