ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿ ಚಿಕನ್ ಮತ್ತು ಚಿಪ್ಸ್ ಕೊಟ್ಟಿಲ್ಲವೆಂದು ಆಶಾ ಕಾರ್ಯಕರ್ತೆ ಕೈ ಮುರಿದ ಭೂಪ!

ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿ ಓರ್ವ ಆಶಾ ಕಾರ್ಯಕರ್ತೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಅಬ್ಬಾಸ್ ಗ್ರಾಮದಲ್ಲಿ ನಡೆದಿದೆ. ಆಶಾ ಕಾರ್ಯಕರ್ತೆ ರೇಣುಕಾ ಕುಡಕಿ ಮೇಲೆ ಸೋಮನಾಥ್ ಕಾಂಬಳೆ ಎಂಬುವವರು ಹಲ್ಲೆ ಮಾಡಿ ಕೈ ಮುರಿದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿ ಓರ್ವ ಆಶಾ ಕಾರ್ಯಕರ್ತೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಅಬ್ಬಾಸ್ ಗ್ರಾಮದಲ್ಲಿ ನಡೆದಿದೆ. ಆಶಾ ಕಾರ್ಯಕರ್ತೆ ರೇಣುಕಾ ಕುಡಕಿ ಮೇಲೆ ಸೋಮನಾಥ್ ಕಾಂಬಳೆ ಎಂಬುವವರು ಹಲ್ಲೆ ಮಾಡಿ ಕೈ ಮುರಿದಿದ್ದಾರೆ.

ಮಹಾರಾಷ್ಟ್ರದ ಮುಂಬೈನಿಂದ ವಾಪಸ್ಸಾಗಿದ್ದ ಸೋಮನಾಥ್ ಅವರನ್ನು ರೇಣುಕಾ, ಗ್ರಾಮದ ಸರ್ಕಾರಿ ಶಾಲೆಯ ಕ್ವಾರಂಟೈನ್ ಕೇಂದ್ರಕ್ಕೆ ಸೇರಿಸಿದ್ದರು. ಕ್ವಾರಂಟೈನ್ ಕೇಂದ್ರದಲ್ಲಿದ್ದ ಆತ ಊಟಕ್ಕೆ ಚಿಕನ್ ಹಾಗೂ ಮಕ್ಕಳಿಗೆ ಚಿಪ್ಸ್ ಬೇಕು ಎಂದು ಬೇಡಿಕೆ ಇಟ್ಟಿದ್ದನು. ಈ ವೇಳೆ ಆಶಾ ಕಾರ್ಯಕರ್ತೆ ರೇಣುಕಾ ಅವರು ಆಹಾರ ಸರಬರಾಜು ನನ್ನಿಂದ ಆಗುವುದಿಲ್ಲ. ಈ
ಬಗ್ಗೆ ಅಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ. 

ಇದರಿಂದ ಆಕ್ರೋಶಗೊಂಡ ಸೋಮನಾಥ್, ರೇಣುಕಾ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ರೇಣುಕಾ ಅವರ ಕೈ ಮುರಿದಿದ್ದು, ಆಳಂದ ಪಟ್ಟಣದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೋಮನಾಥ್ ಹೆಂಡತಿ ಸೇರಿ ಕುಟುಂಬದ ಐವರು ಸದಸ್ಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com