ಪ್ರಸಕ್ತ ಸಾಲಿನ ಮಾನ್ಸೂನ್ ಎದುರಿಸಲು ರಾಜ್ಯ ಸಿದ್ಧ: ಸಚಿವ ಆರ್.ಅಶೋಕ್

ಪ್ರಸಕ್ತ ಸಾಲಿನ ಮಾನ್ಸೂನ್ ಎದುರಿಸಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದೆ ಎಂದು ಸಚಿವ ಆರ್.ಅಶೋಕ್ ಅವರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಪ್ರಸಕ್ತ ಸಾಲಿನ ಮಾನ್ಸೂನ್ ಎದುರಿಸಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದೆ ಎಂದು ಸಚಿವ ಆರ್.ಅಶೋಕ್ ಅವರು ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಲು ಸಿದ್ಧವಿದೆ. ಇದೇ ಮೊದಲ ಬಾರಿಗೆ ರಾಜ್ಯ ವಿಪತ್ತು ನಿಯಂತ್ರಣ ನಿಧಿಯಿಂದ ಮಾನ್ಸೂನ್ ಆರಂಭಕ್ಕೂ ಮುನ್ನವೇ ರೂ. 201.8 ಕೋಟಿ ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ. 

ಕೇಂದ್ರ ಬಿಡುಗಡೆ ಮಾಡಿರುವ ಈ ಹಣವನ್ನು ಮಳೆಯಿಂದ ಎದುರಾದ ನಷ್ಟ ಹಾಗೂ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತದೆ. ಕಳೆದ ಬಾರಿ ಬಂದಿದ್ದ ಮಳೆಯಿಂದಾಗಿ ಭಾರೀ ಹಾನಿಗಳು ಸಂಭವಿಸಿತ್ತು. ಇನ್ನೂ 32,424 ರಷ್ಟು ಮನೆಗಳನ್ನು ಮರು ನಿರ್ಮಾಣ ಮಾಡುವ ಅಗತ್ಯವಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com