ಮಹಾರಾಷ್ಟ್ರ ನಂಜಿಗೆ ಕರ್ನಾಟಕ ತತ್ತರ: ಇಂದು 97 ಪ್ರಕರಣ ಪತ್ತೆ, 2000 ದಾಟಿದ ಸೋಂಕಿತರ ಸಂಖ್ಯೆ!

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು ಇಂದು 97 ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 2056ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರ ನಂಜಿಗೆ ಕರ್ನಾಟಕ ತತ್ತರಿಸಿದ್ದು 97 ಪ್ರಕರಣಗಳ ಪೈಕಿ 74 ಪ್ರಕರಣಗಳಿಗೆ ಮುಂಬೈ ನಂಟಿದೆ. ಇನ್ನು ಬೆಂಗಳೂರಿನಲ್ಲಿ ಇಂದು ಒಂದೇ ಒಂದು ಕೇಸ್ ಪತ್ತೆಯಾಗದಿರುವುದು ಸ್ವಲ್ಪ ನೆಮ್ಮದಿ ತಂದಿದೆ.
ಚಿಕ್ಕಬಳ್ಳಾಪುರ 26, ಉಡುಪಿ 18, ಹಾಸನ 14, ಮಂಡ್ಯ 15, ಕಲಬುರಗಿ 6, ದಾವಣಗೆರೆ 4, ಯಾದಗಿರಿ 5, ತುಮಕೂರು 2, ಉತ್ತರ ಕನ್ನಡ 2, ವಿಜಯಪುರ, ದಕ್ಷಿಣ ಕನ್ನಡ, ಕೊಡಗಿನಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ.
ರಾಜ್ಯದಲ್ಲಿ ಒಟ್ಟಾರೆ 2056 ಪ್ರಕರಣ ಪೈಕಿ 635 ಮಂದಿ ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿ 1,378 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟಾರೆ 42 ಮಂದಿ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


