

ಚಿಕ್ಕಮಗಳೂರು: ಕೊರೋನಾ ಸೋಂಕು ತಗುಲಿರುವ ಭೀತಿಯಿಂದಾಗಿ ಐಸೋಲೇಷನ್ ವಾರ್ಡ್'ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಕೊಪ್ಪ ಮೂಲದ 53 ವರ್ಷದ ವ್ಯಕ್ತಿ ಆಸ್ಪತ್ರೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.
ಕೊರೋನಾ ಸೋಂಕು ತಲುಗಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಆತನ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿತ್ತು.
ಇದೀಗ ವೈದ್ಯಕೀಯ ವರದಿ ಬರುವುದಕ್ಕೂ ಮುನ್ನವೇ ವ್ಯಕ್ತಿ ವೈರಸ್ ಭೀತಿಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಹೇಳಲಾಗುತ್ತಿದೆ.