ಉಡುಪಿ- ಕಾರ್ಕಳದಲ್ಲಿ ಇಬ್ಬರು ಪೊಲೀಸರಿಗೆ ಕೊರೊನಾ ಸೋಂಕು‌: 3 ಠಾಣೆ ಸೀಲ್‌ಡೌನ್

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ‌ಹಾಗೂ ಅಜೆಕಾರು ಪೊಲೀಸ್ ಠಾಣೆಯ ಎಎಸ್‌ಐ‌ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ‌ ಹಾಗೂ ಮೂರು ಪೊಲೀಸ್ ಠಾಣೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಉಡುಪಿ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ‌ಹಾಗೂ ಅಜೆಕಾರು ಪೊಲೀಸ್ ಠಾಣೆಯ ಎಎಸ್‌ಐ‌ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ‌ ಹಾಗೂ ಮೂರು ಪೊಲೀಸ್ ಠಾಣೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಕಾರ್ಕಳ ನಗರ ಹಾಗೂ ಕಾರ್ಕಳ ವೃತ್ತ‌ ನಿರೀಕ್ಷಕರ ಕಚೇರಿ ಒಂದೇ ಕಟ್ಟಡದಲ್ಲಿ‌ ಇರುವುದರಿಂದ ಈ‌ ಮೂರನ್ನು ಸೀಲ್‌ಡೌನ್ ಮಾಡಲಾಗಿದೆ. ಇದರ ಜತೆಗೆ ಅಜೆಕಾರು ಪೊಲೀಸ್ ಠಾಣೆಯ ಎಎಸ್‌ಐ‌ಗೆ ಕೊರೊನಾ ದೃಢ ಪಟ್ಟಿರುವುದರಿಂದ ಅಜೆಕಾರು ಠಾಣೆಯೂ ಸೀಲ್‌ಡೌನ್ ಆಗಿದೆ.

ವೃತ್ತ ನಿರೀಕ್ಷಕರ ಕಚೇರಿ ಹಾಗೂ ಮೂರು ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಸೇರಿ 80ಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿ ಇದ್ದಾರೆ. ಇವರಿಬ್ಬರಿಗೆ ಕೊರೊನಾ ಹೇಗೆ ಬಂದಿದೆ ಎನ್ನುವುದನ್ನು ಜಿಲ್ಲಾಡಳಿತ ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದೆ. ಉಳಿದ ಪೊಲೀಸ್‌ ಸಿಬ್ಬಂದಿಯನ್ನು ಕ್ವಾರಂಟೈನ್‌ ಮಾಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com