ದ್ವಿತೀಯ ಪಿಯುಸಿ ಮೌಲ್ಯಮಾಪನ: ವಿಕೇಂದ್ರೀಕರಣ ಕುರಿತು ಯೂಟರ್ನ್ ಹೊಡೆದ ಸರ್ಕಾರ, ಆತಂಕದಲ್ಲಿ ಉಪನ್ಯಾಸಕರು

ದ್ವಿತೀಯ ಪದವಿ ಪೂರ್ವ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರಗಳನ್ನು ಕೊರೋನಾ ಸೋಂಕು ಹರಡುವ ಭೀತಿಯಿಂದಾಗಿ ಈ ಬಾರಿ ವಿಕೇಂದ್ರೀಕರಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದ ಶಿಕ್ಷಣ ಇಲಾಖೆ ಇದೀಗ ಯೂಟರ್ನ್ ಹೊಡೆದಿದ್ದು, ಪರಿಣಾಮ ಕೊರೋನಾ ಹಿನ್ನೆಲೆಯಲ್ಲಿ ಉಪನ್ಯಾಸಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ದ್ವಿತೀಯ ಪದವಿ ಪೂರ್ವ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರಗಳನ್ನು ಕೊರೋನಾ ಸೋಂಕು ಹರಡುವ ಭೀತಿಯಿಂದಾಗಿ ಈ ಬಾರಿ ವಿಕೇಂದ್ರೀಕರಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದ ಶಿಕ್ಷಣ ಇಲಾಖೆ ಇದೀಗ ಯೂಟರ್ನ್ ಹೊಡೆದಿದ್ದು, ಪರಿಣಾಮ ಕೊರೋನಾ ಹಿನ್ನೆಲೆಯಲ್ಲಿ ಉಪನ್ಯಾಸಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. 

ಇದೀಗ ಮತ್ತೆ ಶಿಕ್ಷಣ ಇಲಾಖೆ ಬಳಿ ಮನವಿ ಮಾಡಿಕೊಳ್ಳುತ್ತಿರುವ ಉಪನ್ಯಾಸಕರು, ನಿರ್ಣಯವನ್ನು ಮರು ಪರಿಶೀಲನೆ ನಡೆಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.
 
ಮೌಲ್ಯಮಾಪನ ಕೇಂದ್ರಗಳನ್ನು ಜಿಲ್ಲಾ ಕೇಂದ್ರಗಳಲ್ಲಿಯೇ ಸ್ಥಾಪಿಸಿ ಉಪನ್ಯಾಸಕರಿಗೆ ಅನುಕೂಲ ಕಲ್ಪಿಸಬೇಕೆಂದು ಉಪನ್ಯಾಸಕರ ಸಂಘವು ಪಿಯು ಇಲಾಖೆಯನ್ನು ಒತ್ತಾಯಿಸುತ್ತಿದೆ. 

ಬೆಂಗಳೂರು, ಮೈಸೂರು, ಮಂಗಳೂರು, ಕಲಬುರಗಿ, ಬೆಳಗಾವಿ, ಕೋಲಾರ ಮತ್ತು ದಾವಣಗೆರೆಯಲ್ಲಿ ಮಾತ್ರ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಿಲಾಗಿದೆ. ಮೌಲ್ಯಮಾಪಕರಿಗೆ ಸಾರಿಗೆ ಹಾಗೂ ವಸತಿ ವ್ಯವಸ್ಥೆ ಕಷ್ಟಸಾಧ್ಯ, ಆದ್ದರಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯ ಮಾಪನ ಮಾಡಿದರೆ ಉಪನ್ಯಾಸಕರಿಗೆ ಅನುಕೂಲವಾಗಲಿದೆ ಎಂದು ಒತ್ತಾಯಿಸಿದ್ದಾರೆ. 

ಪ್ರಸ್ತುತ ನಿಗದಿ ಮಾಡಿರುವ 7 ಜಿಲ್ಲಾ ಕೇಂದ್ರಗಳಲ್ಲಿಯೇ ಶೇ.70ರಷ್ಟು ಮೌಲ್ಯಮಾಪಕರಿದ್ದಾರೆ. ಒಂದೆರಡು ದಿನ ತಡವಾಗಬಹುದು ಅಷ್ಟೇ. ಎಲ್ಲೆಡೆ ಕೇಂದ್ರ ತೆರೆಯಲು ಸಾಧ್ಯವಿಲ್ಲ ಎಂದು ಪಿಯು ಇಲಾಖೆ ನಿರ್ದೇಶಕಿ ಕನಗವಲ್ಲಿಯವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com