ರಾಜ್ಯದಲ್ಲಿ ಹೊಸದಾಗಿ 75 ಮಂದಿಗೆ ವಕ್ಕರಿಸಿದ ಕೊರೋನಾ: ಸೋಂಕಿತರ ಸಂಖ್ಯೆ 2,493ಕ್ಕೆ ಏರಿಕೆ

ರಾಜ್ಯದಲ್ಲಿಂದು ಮತ್ತೆ ಹೊಸದಾಗಿ 75 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 2493ಕ್ಕೇರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ ಹೊಸದಾಗಿ 75 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 2493ಕ್ಕೇರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಮಾಹಿತಿ ನೀಡಿದೆ. 

ಉಡುಪಿಯಲ್ಲಿ 27, ಹಾಸನದಲ್ಲಿ 13 ಹಾಗೂ ಬೆಂಗಳೂರಿನಲ್ಲಿ ಏಳು ಮಂದಿಗೆ ಸೋಂಕು ತಗುಲಿದೆ. ವಿಜಯಪುರದಲ್ಲಿ 2, ಕಲಬುರಗಿಯಲ್ಲಿ 3, ರಾಯಚೂರಿನಲ್ಲಿ 1, ದಕ್ಷಿಣ ಕನ್ನಡದಲ್ಲಿ 6, ಚಿಕ್ಕಮಗಳೂರಿನಲ್ಲಿ 3, ಚಿತ್ರದುರ್ಗದಲ್ಲಿ 6, ಯಾದಗಿರಿಯಲ್ಲಿ 7 ಪ್ರಕರಣಗಳು ವರದಿಯಾಗಿವೆ.

ಬೆಂಗಳೂರಿನಲ್ಲಿ ಸೋಂಕು ಪತ್ತೆಯಾಗಿರುವ 7 ಮಂದಿಯ ಪೈಕಿ ಮಂಗನಪಾಳ್ಯದ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ವಿದೇಶದಿಂದ ಬಂದಿರುವ ವ್ಯಕ್ತಿಯೋರ್ವರಲ್ಲಿ ವೈರಸ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 

ಇವರಲ್ಲಿ ದೆಹಲಿ ಹಾಗೂ ಮುಂಬೈ ಆಗಮಿಸಿದ ಸೋಂಕಿತರು ಹೆಚ್ಚಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 49 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 809 ಮಂದಿ ಗುಣಮುಖರಾಗಿದ್ದು, 1635 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com