ಜೂನ್ 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅನುಮತಿ: ಕೋಟ ಶ್ರೀನಿವಾಸ ಪೂಜಾರಿ

ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ
Updated on

ಮಂಗಳೂರು: ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿ, ಎರಡು ತಿಂಗಳ ಬಿಲ್‍ಗಳನ್ನು ಒಟ್ಟಿಗೆ ನೀಡಿದ್ದರೂ, ನಿಗದಿತ ಸರಾಸರಿ ದರಕ್ಕಿಂದ ಹೆಚ್ಚು ಮೊತ್ತದ ಬಿಲ್ ಮೆಸ್ಕಾಂ ನೀಡಿರುವುದರ ಬಗ್ಗೆ ಸಾರ್ವಜನಿಕರ ಅಸಮಾಧಾನ ತನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ  ಈಗಾಗಲೇ ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಶನಿವಾರ ಮತ್ತೊಮ್ಮೆ ಸಭೆ ನಡೆಸಿ, ಗ್ರಾಹಕರಿಗೆ ಅನ್ಯಾಯವಾಗದಂತೆ ಗಮನಹರಿಸಲು ನಿರ್ದೇಶಿಸಲಾಗುವುದು ಎಂದು ಹೇಳಿದರು. ಮೀನುಗಾರಿಕೆ ಅವಧಿಯನ್ನು ಕೇಂದ್ರ ಸರಕಾರ ಜೂನ್ 15ರವರೆಗೆ ವಿಸ್ತರಿಸಿ  ಆದೇಶಿಸಿದೆ. ರಾಜ್ಯ ಸರಕಾರವೂ ಇದರನ್ವಯ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ವಿಮಾ ಕಂಪೆನಿ ಸೇರಿದಂತೆ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆ ನೀಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ರಾಜ್ಯದಲ್ಲಿ ಒಳನಾಡ ಮೀನುಗಾರಿಕೆ ಅಭಿವೃದ್ಧಿಪಡಿಸಲು ಈಗಾಗಲೇ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿದೆ. ಮುಂದಿನ 10 ವರ್ಷದಲ್ಲಿ ಮೀನುಮರಿ ಉತ್ಪಾದನೆ ಸೇರಿದಂತೆ ಈ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿಗೆ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಸಚಿವರು ಹೇಳಿದರು
 

ರಾಜ್ಯದಲ್ಲಿ ಜೂನ್ 1ರಿಂದ ದೇವಸ್ಥಾನ, ಮಸೀದಿ, ಚರ್ಚ್ ಮತ್ತಿತರ ಧಾರ್ಮಿಕ ಸ್ಥಳಗಳನ್ನು ತೆರೆಯುವ ಬಗ್ಗೆ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಬಗ್ಗೆ ಕೇಂದ್ರ ಸರಕಾರದ ಅನುಮೋದನೆ ನಿರೀಕ್ಷೆಯಲ್ಲಿದ್ದೇವೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಜಿ.ಪಂ.  ಸ್ಥಾಯೀ ಸಮಿತಿ ಅಧ್ಯಕ್ಷ ರವೀಂದ್ರ ಕಂಬಳಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com