ಪ್ರತ್ಯೇಕ ಕನ್ನಡ ಧ್ವಜಕ್ಕೆ ಮಾನ್ಯತೆ ನೀಡದೆ ಕೇಂದ್ರದಿಂದ ದ್ರೋಹ: ಸಿದ್ದರಾಮಯ್ಯ

ಕನ್ನಡದ ಚಾರಿತ್ರಿಕ ಬೆಳವಣಿಗೆ ಮತ್ತು ಸ್ವಾಭಿಮಾನದ ಸಂಕೇತವಾಗಿದ್ದ ಪ್ರತ್ಯೇಕ ಕನ್ನಡ ಧ್ವಜಕ್ಕೆ ಮಾನ್ಯತೆ ನೀಡದೆ ಕೇಂದ್ರ ಸರ್ಕಾರ ದ್ರೋಹ ಎಸಗುತ್ತಲೇ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಕನ್ನಡದ ಚಾರಿತ್ರಿಕ ಬೆಳವಣಿಗೆ ಮತ್ತು ಸ್ವಾಭಿಮಾನದ ಸಂಕೇತವಾಗಿದ್ದ ಪ್ರತ್ಯೇಕ ಕನ್ನಡ ಧ್ವಜಕ್ಕೆ ಮಾನ್ಯತೆ ನೀಡದೆ ಕೇಂದ್ರ ಸರ್ಕಾರ ದ್ರೋಹ ಎಸಗುತ್ತಲೇ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಕರ್ನಾಟಕ ರಾಜ್ಯವು ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರಕಾರದ ಸರ್ವಾಧಿಕಾರಿ ನೀತಿಗಳಿಂದ ದಿನೇ ದಿನೇ ಸೊರಗುತ್ತಿರುವುದು ಅತ್ಯಂತ ಆತಂಕಕಾರಿಯಾದ ಸಂಗತಿಯಾಗಿದೆ. ನಾಡಿನಲ್ಲಿ ಪ್ರಜ್ಞೆ ಇರುವವರೆಲ್ಲರೂ ಈ ಕುರಿತು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಕೇಂದ್ರದ ದೊಡ್ಡಣ್ಣನಂತಹ ನೀತಿಗಳ ವಿರುದ್ಧ ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದಿದ್ದಾರೆ.

ನಿಧಾನಕ್ಕೆ ಒಕ್ಕೂಟ ವ್ಯವಸ್ಥೆಯು ಕೇಂದ್ರೀಕೃತ ವ್ಯವಸ್ಥೆಯಾಗಲು ಪ್ರಾರಂಭವಾಗಿದೆ. ಹೀಗಾಗುವುದರ ವಿರುದ್ಧ ಹಲವು ಆಯೋಗಗಳು ವರದಿ ಸಲ್ಲಿಸಿವೆ. ಕೇಂದ್ರ - ರಾಜ್ಯ ಸಂಬಂಧಗಳ ಕುರಿತು ನ್ಯಾಯಾಲಯಗಳು ತೀರ್ಪು ನೀಡಿವೆ. ಧುರೀಣರು ಧ್ವನಿ ಎತ್ತಿದ್ದಾರೆ. ಆದರೆ, ಇನ್ನಷ್ಟು ಮತ್ತಷ್ಟು ಕೇಂದ್ರೀಕರಣ ಆಗುತ್ತಲೇ ಇದೆ. ರಾಜ್ಯಗಳು ದುರ್ಬಲವಾಗುತ್ತಿವೆ. ಇದು ಒಳ್ಳೆಯ ಸೂಚನೆ ಅಲ್ಲ. ಇದನ್ನು ವಿರೋಧಿಸುವುದು ಅದರಲ್ಲೂ ಇದು ಪಕ್ಷಾತೀತವಾಗಿ ಎಲ್ಲರ ಕರ್ತವ್ಯವಾಗಿದೆ. ಈ ಸಂದರ್ಭದಲ್ಲಿ ನಾವು ಧ್ವನಿ ಎತ್ತದೇ ಹೋದರೆ ರಾಜ್ಯವು ಕೆಲವರ ಕಪಿಮುಷ್ಠಿಗೆ ಸಿಲುಕಿ ಶಾಶ್ವತ ಗುಲಾಮಗಿರಿಯತ್ತ ಸಾಗಿ ಬಿಡಬಹುದೆಂದು ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com