ರಾಜರಾಜೇಶ್ವರಿ ನಗರ ಉಪಚುನಾವಣೆ: ಭದ್ರತೆಗೆ 2,563 ಮಂದಿ ಪೊಲೀಸರ ನಿಯೋಜನೆ

ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿ ನಗರ ಉಪಚುನಾವಣೆ ಮಂಗಳವಾರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಗಾಗಿ 2,563 ಮಂದಿ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿ ನಗರ ಉಪಚುನಾವಣೆ ಮಂಗಳವಾರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಗಾಗಿ 2,563 ಮಂದಿ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ. 

ಉಪಚುನಾವಣೆಗೆ ತಮದಾನ ನಡೆಯುವ ಹಿನ್ನೆಲೆಯಲ್ಲಿ ಆಯಾ ಪೊಲೀಸ್ ವಿಭಾಗಗಳ ಪೊಲೀಸ್ ಆಯುಕ್ತರಿಗೆ (ಡಿಸಿಪಿ) ಭದ್ರತಾ ವ್ಯವಸ್ಥೆ ನಿಯೋಜನೆಯ ಜವಾಬ್ದಾರಿಯನ್ನು ನೀಡಲಾಗಿದೆ.

ಸೂಕ್ಷ್ಮ ಮತ್ತು ಅತ್ಯಂತ ಸೂಕ್ಷ್ಮ ಮತದಾನ ಕೇಂದ್ರಗಳು ಇರುವ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾಪಡೆಗಳನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡುವಂತೆ ಎಲ್ಲಾ ಡಿಸಿಪಿಗಳು, ಎಸಿಪಿಗಳು ಮತ್ತು ಇನ್ಸ್‌ಪೆಕ್ಟರ್‌ಗಳಿಗೆ ಸೂಚಿಸಲಾಗಿದೆ. ಸಮಾಜ ವಿರೋಧಿ ಚಟುವಟಿಕೆ ನಡೆಸುವ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಪೊಲೀಸ್ ಇಲಾಖೆಯ ಸೂಚನೆ ಮೇರೆಗೆ ಪರವಾನಗಿ ಪಡೆದು ಶಸ್ತ್ರಾಸ್ತ್ರಗಳನ್ನಿಟ್ಟುಕೊಂಡಿದ್ದ ಜನರು ಈಗಾಗಲೇ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ವಶಕ್ಕೆ ನೀಡಿದ್ದಾರೆ. ಚುನಾವಣಾಧಿಕಾರಿಗಳ ಸೂಚನೆ ಮೇರೆಗೆ ಮತದಾನ ಕ್ಷೇತ್ರಗಳಲ್ಲಿ ಧರ್ಮಲ್ ಸ್ಕ್ರೀನಿಂಗ್ ನಡೆಸಲಾಗುವುದು ಹಾಗೂ ಹ್ಯಾಂಡ್ ಸ್ಯಾನಿಟೈಜರ್ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದಿದ್ದಾರೆ. 

ಆರ್.ಆರ್.ನಗರ ಮತ್ತು ಶಿರಾ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದ್ದು, ಮತದಾನದಲ್ಲಿ 3,26,114 ಮಹಿಳೆಯರು ಸೇರಿದಂತೆ ಒಟ್ಟು 6,78,012 ಮಂದಿ ಮತದಾನ ಮಾಡಲಿದ್ದಾರೆ. 

ಒಟ್ಟು 1,008 ಮತದಾನ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಚುನಾವಣಾ ಕಣಕ್ಕಿಳಿದಿದ್ದಾರೆ. ಚುನಾವಣಾ ಪ್ರಚಾರದ ವೇಳೆ ನಡೆದಿರುವ ನಿಯಮ ಉಲ್ಲಂಘನೆ ಹಾಗೂ ಇನ್ನಿತರೆ ಘಟನೆಗಳು ಸೇರಿದಂತೆ ಪೊಲೀಸರು ಒಟ್ಟು 54 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಇದರಲ್ಲಿ 13 ಎಫ್ಐಆರ್, 41 ಎನ್'ಸಿಆರ್'ಗಳಿವೆ ಎಂದು ತಿಳಿದುಬಂದಿದೆ. 

ಈ ವರೆಗೂ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ 37 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದು, ಅಬಕಾರಿ ಇಲಾಖೆಯು 12 ಪ್ರಕರಣಗಳನ್ನು ದಾಖಲಿಸಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com