ಬಿಇ ಆರ್ಕಿಟೆಕ್ಚರ್‌ ಸಿಇಟಿ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ ಪಟ್ಟಿಗೆ ಕೆಇಎ ತಡೆಯಾಜ್ಞೆ

ಪ್ರಸಕ್ತ ಸಾಲಿನ ಬಿಇ ಆರ್ಕಿಟೆಕ್ಚರ್‌ ಪ್ರವೇಶಾತಿಗೆ ಪ್ರಕಟಗೊಂಡಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರ‍್ಯಾಂಕ್‌ ಪಟ್ಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಂಗಳವಾರ ತಡೆಯಾಜ್ಞೆ ನೀಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
Updated on: 

ಬೆಂಗಳೂರು: ಪ್ರಸಕ್ತ ಸಾಲಿನ ಬಿಇ ಆರ್ಕಿಟೆಕ್ಚರ್‌ ಪ್ರವೇಶಾತಿಗೆ ಪ್ರಕಟಗೊಂಡಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರ‍್ಯಾಂಕ್‌ ಪಟ್ಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಂಗಳವಾರ ತಡೆಯಾಜ್ಞೆ ನೀಡಿದೆ.

ರ‍್ಯಾಂಕ್ ಪಟ್ಟಿ ತಯಾರಿಸುವ ಸಂದರ್ಭದಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ಅನೇಕ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಪ್ರಾಧಿಕಾರ ಈ ಆದೇಶ ನೀಡಿದೆ.

ಎನ್‌ಟಿಎ ಅಂಕವನ್ನು ಶೇಕಡಾವಾರು ಮಾದರಿಯಲ್ಲಿ ನೀಡಿದ ಜೆಇಇ ಪರೀಕ್ಷೆ ಫಲಿತಾಂಶ ಆಧರಿಸಿ ಕೆಇಎ ರ‍್ಯಾಂಕ್‌ ಪಟ್ಟಿ ಪ್ರಕಟಿಸಿದೆ. ಇದರಲ್ಲಿ ಹಲವು ವ್ಯತ್ಯಾಸಗಳು ಕಂಡುಬಂದಿವೆ ಎಂದು ವಿದ್ಯಾರ್ಥಿಗಳು ಆಕ್ಷೇಪಿಸಿದ್ದರು. 

ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಗಳಿಸಿರುವ ಒಟ್ಟು ಅಂಕದ ಶೇ. 50ರಷ್ಟು ಮತ್ತು ಜೆಇಇ/ನಾಟಾ (ನ್ಯಾಷನಲ್‌ ಆಪ್ಟಿಟ್ಯೂಡ್‌ ಟೆಸ್ಟ್‌ ಇನ್‌ ಆರ್ಕಿಟೆಕ್ಚರ್‌) ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಅಂಕದಲ್ಲಿ ಹೆಚ್ಚು ಅಂಕ ಗಳಿಸಿದ ಅದರ ಶೇ.50ರಷ್ಟು ಸೇರಿಸಿ ಕೆಇಎ ರ‍್ಯಾಂಕ್‌ ಪಟ್ಟಿ ಪ್ರಕಟಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com