ಯೋಗಿಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ

ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿ
Updated on: 

ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.ಗುರುವಾರ ಬೆಳಗ್ಗೆ ವಿನಯ ಕುಲಕರ್ಣಿ ಮನೆ ಮೇಲೆ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.

 ಸಂಜೆ 4.30ರ ಸುಮಾರಿಗೆ ವಿನಯ ಕುಲಕರ್ಣಿ ಬಂಧಿಸಿದ ಅಧಿಕಾರಿಗಳು, ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

 ಮೂರು ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಬಿಐ ಪರ ವಕೀಲರು ಕೋರಿದರು. ಆದರೆ ನ್ಯಾಯಾಲಯ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿತು. ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com