ಮದುವೆ ವೈಯಕ್ತಿಕ ಆಯ್ಕೆ: ಸರ್ಕಾರದ ಲವ್ ಜಿಹಾದ್ ನಿಷೇಧ ಕಾಯ್ದೆ ಚಿಂತನೆಗೆ ಸಿದ್ದರಾಮಯ್ಯ ಖಂಡನೆ

ಮದುವೆ ವ್ಯಕ್ತಿಯ ವೈಯಕ್ತಿಕ ಆಯ್ಕೆಯಾಗಿದ್ದು, ಇಂತಹ ಯಾವುದೇ ಕಾನೂನುಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದ್ದೇ ಆದರೆ, ಅದು ಅಸಂವಿಧಾನಿಕವಾಗುತ್ತದೆ ಮತ್ತು ಕಾನೂನು ಪರಿಶೀಲನೆಗೊಳಗಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು; ಮದುವೆ ವ್ಯಕ್ತಿಯ ವೈಯಕ್ತಿಕ ಆಯ್ಕೆಯಾಗಿದ್ದು, ಇಂತಹ ಯಾವುದೇ ಕಾನೂನುಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದ್ದೇ ಆದರೆ, ಅದು ಅಸಂವಿಧಾನಿಕವಾಗುತ್ತದೆ ಮತ್ತು ಕಾನೂನು ಪರಿಶೀಲನೆಗೊಳಗಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ವ್ಯಕ್ತಿಯಿಂದಲೂ ಯಾರೂ ಸಾಂವಿಧಾನಿಕ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದ್ದು, ಇದಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಶಾಲೆ ಪುನರಾರಂಭಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ಕೊರೋನಾದಿಂದ ರಾಜ್ಯ ಮುಕ್ತಗೊಳ್ಳುವವರೆಗೂ ರಾಜ್ಯ ಸರ್ಕಾರ ಶಾಲೆಗಳನ್ನು ಪುನರಾರಂಭಿಸಬಾರದು ಎಂಬುದು ನನ್ನ ಅಭಿಪ್ರಾಯವಾಗಿದೆ. ತರಾತುರಿಯಲ್ಲಿ ಸರ್ಕಾರ ಯಾವುದೇ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ತಿಳಿಸಿದ್ದಾರೆ. 

ತರಗತಿಗಳನ್ನು ಆರಂಭಿಸುವ ಬದಲು ಪ್ರಸ್ತುತ ಆನ್'ಲೈನ್ ತರಗತಿಗಳನ್ನೇ ಮುಂದುವರೆಸಲಿ ಎಂದಿದ್ದಾರೆ. 

ಬಳಿಕ ಉಪಚುನಾವಣೆಕ ಕುರಿತು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳಾದ ರಾಜರಾಜೇಶ್ವರಿ ನಗರ ಅಭ್ಯರ್ಥಿ ಕುಸುಮಾ ಹಾಗೂ ಶಿರಾ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಗೆಲುವು ಸಾಧಿಸಲಿದ್ದಾರೆ. ಈ ಹಿಂದಿನ ಚುನಾವಣೆಯಲ್ಲಿ ಪಿತೂರಿಗಳನ್ನು ನಡೆಸಿದ್ದ ಕಾರಣಕ್ಕೆ ಜಯಚಂದ್ರ ಅವರು ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ. ಚುನಾವಣಾ ಪ್ರಚಾರದ ವೇಳೆ ಜನರು ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಹೋಲಿಕೆ ಮಾಡಿದ್ದರು. ಉಪ ಚುನಾವಣೆ ಜನರ ನಾಡಿಮಿಡಿತದ ಕುರಿತು ಮಾಹಿತಿ ನೀಡಲಿದೆ. ಫಲಿತಾಂಶದ ಬಳಿಕ ಪಂಚಾಯತ್ ಚುನಾವಣೆ ಸಿದ್ಧತೆಗಳನ್ನು ನಡೆಸಲಾಗುತ್ತದೆ. ಉಪಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ದೆಹಲಿಯಿಂದ ಈ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com