ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಗುರುವಾರ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. 
ಮಾಜಿ ಸಚಿವ ವಿನಯ್ ಕುಲಕರ್ಣಿ
ಮಾಜಿ ಸಚಿವ ವಿನಯ್ ಕುಲಕರ್ಣಿ

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಗುರುವಾರ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. 

ಯೋಗಿಶ್ ಗೌಡ ಹತ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ ಬರಕೊಟ್ರಿಯಲ್ಲಿರುವ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದೂ ವರದಿಯಾಗಿದೆ.

2016ರ ಜೂನ್ 15ರಂದು 2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ ಪ್ರಕರಣದ ವಿಚಾರಣೆ ಆರಂಭಿಸಿತ್ತು. ಇದೀಗ ವಿನಯ್ ಕುಲಕರ್ಣಿಯವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

2016ರಲ್ಲಿ ನಡೆದಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆಗ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿದ್ದ ವಿನಯ್ ಕುಲಕರ್ಣಿ ಅವರ ಹೆಸರು ಕೇಳಿ ಬಂದಿದ್ದು ಸಚಿವ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಯೋಗೇಶ್ ಗೌಡ ಅವರು ಶಾಮಿಲಾಗಿದ್ದಾರೆ ಎಂದು ಆರೋಪಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com