ಬೀದರ್: ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕು ದೃಢಪಡುತ್ತಿದ್ದಂತೆ 4-5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ. ಬಂಡೆಪ್ಪ ಖಾಶೆಂಪೂರ್ ಶಿರಾದಲ್ಲಿ ನಡೆದ ಉಪ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಿದ್ದರು. ಹೀಗಾಗೀ ಪ್ರಚಾರದ ವೇಳೆ ಕೊರೊನಾ ಸೋಂಕು ತಗುಲಿರುವ ಸಾಧ್ಯತೆ ಇದೆ.
Advertisement