ಸಿಗಂದೂರು ವಿವಾದ: ಯಾವುದೇ ಕಾರಣಕ್ಕು ದೇವಾಲಯವನ್ನು ಮುಜರಾಯಿ ವ್ಯಾಪ್ತಿಗೆ ತರುವುದಿಲ್ಲ- ಮುಖ್ಯಮಂತ್ರಿ ಭರವಸೆ

ಸುಮಾರು 20 ವಿವಿಧ ಜನಾಂಗಗಳ ಸ್ವಾಮೀಜಿಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದೇವಾಲಯದಲ್ಲಿ ಸದ್ಯ ಎದ್ದಿರುವ ಮೇಲುಸ್ತುವಾರಿ ಸಮಿತಿ ಕುರಿತ ಗೊಂದಲ ನಿವಾರಣೆ, ಭಕ್ತರ ನೀಡುವ ಹಣಕಾಸು, ದೇಣಿಗೆ ವಿಚಾರದಲ್ಲಿ ಪಾರದರ್ಶಕತೆ ತರುವ ಬಗ್ಗೆ ಪ್ರಮುಖವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
Updated on

ಬೆಂಗಳೂರು: ಸಿಗಂದೂರು ಗೊಂದಲ ವಿಚಾರ ಕುರಿತಂತೆ ಶಾಸಕ ಹರತಾಳು ಹಾಲಪ್ಪ, ರೇಣುಕಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಸುಮಾರು 20 ವಿವಿಧ ಜನಾಂಗಗಳ ಸ್ವಾಮೀಜಿಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದೇವಾಲಯದಲ್ಲಿ ಸದ್ಯ ಎದ್ದಿರುವ ಮೇಲುಸ್ತುವಾರಿ ಸಮಿತಿ ಕುರಿತ ಗೊಂದಲ ನಿವಾರಣೆ, ಭಕ್ತರ ನೀಡುವ ಹಣಕಾಸು, ದೇಣಿಗೆ ವಿಚಾರದಲ್ಲಿ ಪಾರದರ್ಶಕತೆ ತರುವ ಬಗ್ಗೆ ಪ್ರಮುಖವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

ಇವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದೇವಾಲಯವನ್ನು ಯಾವುದೇ ಕಾರಣಕ್ಕೂ ಮುಜರಾಯಿ ವ್ಯಾಪ್ತಿಗೆ ತರುವ ಪ್ರಶ್ನೆಯೇ ಇಲ್ಲ. ಇಲ್ಲಿ ಭಕ್ತರು ನೀಡುವ ಹಣಕಾಸು ವಿಚಾರದಲ್ಲಿ ಪಾರದರ್ಶಕತೆ ತರಬೇಕು ಎಂಬುದು ಭಕ್ತರ ಇಚ್ಛೆಯಾಗಿದ್ದರಿಂದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಲಹಾ ಸಮಿತಿ ರಚನೆ ಮಾಡಲಾಗಿದೆ. ಈಗ ರಚನೆಯಾಗಿರುವ ಸಮಿತಿಯಲ್ಲಿ ತಮ್ಮ ಮನವಿಯಂತೆ ಈಡಿಗ ಜನಾಂಗಕ್ಕೆ ಸೇರಿದ ಶ್ರೀ ರೇಣುಕಾನಂದ ಸ್ವಾಮೀಜಿಯವರನ್ನು ಸೇರ್ಪಡೆಗೊಳಿಸಲಾಗುವುದು. ಇವರು ಕೊಡುವ ಸಲಹೆ, ಮಾರ್ಗದರ್ಶನವನ್ನು ತೆಗೆದುಕೊಂಡು ಸಮಿತಿ ಕಾರ್ಯ ಕೈಗೊಳ್ಳಲಿದೆ‌. ಈಗ ರಚನೆಯಾಗಿರುವ ಸಮಿತಿ ಸದ್ಯ ನಾಲ್ಕು ತಿಂಗಳವರೆಗೆ ಮುಂದುವರೆಯಲಿದೆ. ಬಳಿಕ ಸಮಿತಿ ಇರಬೇಕೋ ಅಥವಾ ಅದನ್ನು ಕೈ ಬಿಡಬೇಕೊ ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಬಂಜಾರ ಸಮಾಜದ ಸೇವಾಲಾಲ್ ಅರೇಮಲ್ಲಾಪುರದ ಪ್ರಣಯಾನಂದ ಸ್ವಾಮೀಜಿ, ಭಗೀರಥ ಮಠದ ಪುರುಷೋತ್ತಮ ಪುರಿ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮಿ, ಹೊಸದುರ್ಗ ಕನಕಗುರು ಪೀಠದ ಈಶ್ವರಾನಂದ ಪುರ ಸ್ವಾಮೀಜಿ, ತಿಗಳರ ಲಕ್ಷ್ಮೀನರಸಿಂಹ ಸ್ವಾಮಿ, ಮಡಿವಾಳರ ಮಾಚಿದೇವ ಶ್ರೀಗಳು, ಗಾಣಿಗರ ಡಾ‌ ಬಸವ ಕುಮಾರ ಸ್ವಾಮೀಜಿ, ಚಿತ್ರದುರ್ಗದ ಮೇದಾರ ಪೀಠದ ಬಸವ ಛಲವಾದಿಸ್ವಾಮಿ, ತೀರ್ಥಹಳ್ಳಿ ಮುಖಂಡರಾದ ಬೇಗುವಳ್ಳಿ ಸತೀಶ್ ಸೇರಿದಂತೆ ಅನೇಕರು ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com