ಎಲ್ ಇಡಿ ಬೀದಿದೀಪ ಅಳವಡಿಕೆ: ರಾಜ್ಯಾದ್ಯಂತ ವಿಸ್ತರಣೆಗೆ ಸರ್ಕಾರ ಮುಂದು

ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ಸಾಗಿದರೆ, ದೇಶದಲ್ಲಿಯೇ ಕರ್ನಾಟಕ ರಾಜ್ಯ ಬೀದಿ ದೀಪಗಳಲ್ಲಿ ಎಲ್ ಇಡಿ ಬಲ್ಬ್ ಗಳನ್ನು ಅಳವಡಿಸಿಕೊಂಡ ರಾಜ್ಯ ಎನಿಸಿಕೊಳ್ಳಲಿದೆ. ಮುಂದಿನ ಆರು ತಿಂಗಳಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೆಲವು ಭಾಗಗಳು ಮತ್ತು ರಾಜ್ಯದ 10 ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ ಎಲ್ ಇಡಿ ಬೀದಿ ದೀಪಗಳು ಅಳವಡಿಕೆಯಾಗಲಿವೆ. ಇದರಿಂದ ವಿದ್ಯುತ್ ಬಳಕೆ ದೀರ್ಘಕಾಲದಲ್ಲಿ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಸುಮಾರು 5 ಲಕ್ಷ ಬೀದಿದೀಪಗಳನ್ನು ಬದಲಿಸಿ ದಕ್ಷ ವಿದ್ಯುತ್ ಉಳಿತಾಯ ಮಾಡುವ ಎಲ್ ಇಡಿ ಬಲ್ಬ್ ಗಳನ್ನು ಬಳಸುವ ಮಹಾತ್ವಾಕಾಂಕ್ಷಿ ಯೋಜನೆಯನ್ನು 2018ರಲ್ಲಿ ಘೋಷಣೆ ಮಾಡಲಾಗಿತ್ತು. ಪ್ರಸ್ತುತ, ಬಿಬಿಎಂಪಿ ಬೀದಿ ದೀಪಗಳ ವೆಚ್ಚವಾಗಿ ಮತ್ತು ನಿರ್ವಹಣೆಗೆ ವರ್ಷಕ್ಕೆ ಸುಮಾರು 250 ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಎಲ್ ಇಡಿ ಬಲ್ಬ್ ಗಳನ್ನು ಅಳವಡಿಸಿಕೊಂಡರೆ ವಿದ್ಯುತ್ ಬಿಲ್ ಮತ್ತು ನಿರ್ವಹಣೆ ವೆಚ್ಚ ಕಡಿಮೆಯಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಹಿರಿಯ ಅಧಿಕಾರಿ, ಮೊದಲ ಹಂತದಲ್ಲಿ, ಒಂದು ಲಕ್ಷ ಬೀದಿದೀಪಗಳನ್ನು ಬದಲಿಸಿ ಎಲ್ ಇಡಿ ಅಳವಡಿಸಲಾಗುತ್ತದೆ. ಈ ವರ್ಷಾಂತ್ಯದಲ್ಲಿ ಕೆಲಸ ಪ್ರಾರಂಭವಾಗಿ ಮುಂದಿನ ವರ್ಷ ಏಪ್ರಿಲ್ ಗೆ ಮುಕ್ತಾಯವಾಗಲಿದೆ. ಬಿಬಿಎಂಪಿ ಈಗಾಗಲೇ ಕೆಲವು ವಲಯಗಳಲ್ಲಿ ಸಮೀಕ್ಷೆ ಮುಗಿಸಿದ್ದು, ಉಳಿದವುಗಳನ್ನು ಸದ್ಯದಲ್ಲಿಯೇ ಮುಕ್ತಾಯಗೊಳಿಸಲಾಗುವುದು ಎಂದಿದ್ದಾರೆ.
10 ಮಹಾನಗರ ಪಾಲಿಕೆಗಳಲ್ಲಿ ನಗರಾಭಿವೃದ್ಧಿ ಇಲಾಖೆ ಯೋಜನೆ ಕೈಗೆತ್ತಿಕೊಳ್ಳಲಿದೆ. ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಮೈಸೂರು, ಮಂಗಳೂರು, ತುಮಕೂರು ಮತ್ತು ದಾವಣಗೆರೆಗಳಲ್ಲಿ ಈಗಾಗಲೇ ಕೆಲಸ ಆರಂಭಿಸಲಾಗಿದ್ದು ದಾವಣಗೆರೆ ಮತ್ತು ಮಂಗಳೂರುಗಳಲ್ಲಿ ಟೆಂಡರ್ ಕರೆಯಲಾಗಿದೆ, ಮೈಸೂರಿನಲ್ಲಿ ಕೂಡ ಮಾಡಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


