ನೆರೆ ಹಾವಳಿಯಿಂದ ಬೆಳೆ ಕಳೆದುಕೊಂಡ ರೈತರ ಆತ್ಮಹತ್ಯೆ ತಪ್ಪಿಸಿ: ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ

ಸತತ ಎರಡು ವರ್ಷಗಳ ನೆರೆಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ರೈತ ಸಮುದಾಯ,ಬೆಳೆದ ಫಸಲು ಕೈಗೆಟುಕದೆ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗುತ್ತಿರುವ ಆಘಾತಕಾರಿ ಬೆಳವಣಿಗೆ ಹತ್ತಿಕ್ಕಲು ರಾಜ್ಯ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ  ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಸತತ ಎರಡು ವರ್ಷಗಳ ನೆರೆಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ರೈತ ಸಮುದಾಯ,ಬೆಳೆದ ಫಸಲು ಕೈಗೆಟುಕದೆ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗುತ್ತಿರುವ ಆಘಾತಕಾರಿ ಬೆಳವಣಿಗೆ ಹತ್ತಿಕ್ಕಲು ರಾಜ್ಯ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ  ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಸರಣಿ ಟ್ವೀಟ್ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಮೂಲಕ ಸಲಹೆ ನೀಡಿರುವ ಅವರು,ಅನ್ನದಾ ತರು ಆತ್ಮಹತ್ಯೆಯ ದಾರಿ ತುಳಿಯದಂತೆ ಆರಂಭದಲ್ಲೇ ಸರಕಾರ ಎಚ್ಚೆತ್ತು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು.ರೈತರಿಗೆ ಆತ್ಮಸ್ಥೈರ್ಯ ತುಂಬಬೇಕು.ಇಲ್ಲದಿದ್ದರೆ ಪರಿಸ್ಥಿತಿ ಬಿಗಡಾಯಿ ಸುತ್ತದೆ.ರೈತರ ಹಿಡಿಶಾಪ  ಸರ್ಕಾರಕ್ಕೆ ತಟ್ಟುತ್ತದೆ ಎಂದು ಹೇಳುವ ಮೂಲಕ ಸರ್ಕಾರ ಎಚ್ಚತ್ತು ಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ರೈತರು ಮತ್ತಷ್ಟು ಸಂಕಷ್ಟವನ್ನು ಎದರುಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 

ಸಿದ್ದರಾಮಯ್ಯ ಸರ್ಕಾರದಲ್ಲಾದ ಸರಣಿ ರೈತರ ಆತ್ಮಹತ್ಯೆ ಈ ಸರ್ಕಾರದಲ್ಲಿ ಆಗುವುದು ಬೇಡ
ಇದೇ ವೇಳೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯೆ ಈಗ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಪುನರಾವರ್ತನೆಯಾಗುವುದಕ್ಕೆ ಬಿಡಬಾರದು ಎಂದು ಹೇಳಿರುವ ಕುಮಾರಸ್ವಾಮಿ, ರಾಜ್ಯದ ರೈತರು ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗುವ  ಮುನ್ಸೂಚನೆ ಸಿಗುತ್ತಿರುವ ಬೆನ್ನಲ್ಲೇ ಸರ್ಕಾರ ಅನ್ನದಾತನ ಕೈಹಿಡಿಯಬೇಕು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯೆ ಸಂಕೋಲೆ ಪುನರಾವರ್ತನೆ ಆಗುವುದಕ್ಕೆ ಬಿಡಬಾರದು. ಸತತ ಎರಡು ವರ್ಷಗಳ ನೆರೆಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ರೈತ  ಸಮುದಾಯ, ಬೆಳೆದ ಫಸಲು ಕೈಗೆಟುಕದೆ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗುತ್ತಿರುವ ಆಘಾತಕಾರಿ ಬೆಳವಣಿಗೆ ಹತ್ತಿಕ್ಕಲು ರಾಜ್ಯ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಅನ್ನದಾತರು ಆತ್ಮಹತ್ಯೆಯ ದಾರಿ ತುಳಿಯದಂತೆ ಆರಂಭದಲ್ಲೇ ಸರಕಾರ ಎಚ್ಚೆತ್ತು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು, ರೈತರಿಗೆ ಆತ್ಮಸ್ಥೈರ್ಯ ತುಂಬಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ, ರೈತರ ಹಿಡಿಶಾಪ ಸರ್ಕಾರಕ್ಕೆ ತಟ್ಟುತ್ತದೆ ಎಂದು ಎಚ್ಚರಿಸುವ ಕುಮಾರಸ್ವಾಮಿ, ಹಾವೇರಿ ಜಿಲ್ಲೆ 2,  ಮಂಡ್ಯ, ದಾವಣಗೆರೆ ಜಿಲ್ಲೆ ತಲಾ ಒಂದು ಸೇರಿದಂತೆ ಕಳೆದ 48 ತಾಸುಗಳ ಅವಧಿಯಲ್ಲಿ ರಾಜ್ಯದಲ್ಲಿ ಸಾಲದ ಸುಳಿಗೆ ನಲುಗಿಹೋದ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ತಮ್ಮನ್ನು ಅಧೀರನನ್ನಾಗಿಸಿದೆ. ರೈತರ ಆತ್ಮಹತ್ಯೆ ಪ್ರಕರಣಗಳು 'ಸಮೂಹ ಸನ್ನಿ' ಆಗದಂತೆ ಆರಂಭದಲ್ಲೇ  ಎಚ್ಚೆತ್ತುಕೊಂಡು, ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com