ರಾಜ್ಯದಲ್ಲಿ ಇಂದು ಹೊಸದಾಗಿ 2,740 ಕೊರೋನಾ ಪ್ರಕರಣ ಪತ್ತೆ; ಚೇತರಿಕೆ ಪ್ರಮಾಣ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಚೇತರಿಕೆ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು 2,360 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು ಇಂದು 2,740 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 8,46,887ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 22 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,391ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು 2,360 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 8,01,799ಕ್ಕೆ ಏರಿಕೆಯಾಗಿದೆ. 33,678 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,579 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,49,327ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 11 ಮಂದಿ ಸಾವನ್ನಪ್ಪಿದ್ದಾರೆ.
ಬಾಗಲಕೋಟೆಯಲ್ಲಿ 7, ಬಳ್ಳಾರಿಯಲ್ಲಿ 53, ಬೆಳಗಾವಿಯಲ್ಲಿ 40, ಬೆಂಗಳೂರು ಗ್ರಾಮಾಂತರದಲ್ಲಿ 19, ಬೀದರ್ ನಲ್ಲಿ 8, ಚಾಮರಾಜನಗರದಲ್ಲಿ 17, ಚಿಕ್ಕಬಳ್ಳಾಪುರದಲ್ಲಿ 6, ಚಿಕ್ಕಮಗಳೂರಿನಲ್ಲಿ 25, ಚಿತ್ರದುರ್ಗದಲ್ಲಿ 106, ದಕ್ಷಿಣ ಕನ್ನಡದಲ್ಲಿ 78, ದಾವಣಗೆರೆಯಲ್ಲಿ 39, ಧಾರವಾಡದಲ್ಲಿ 60, ಗದಗದಲ್ಲಿ 11, ಹಾಸನದಲ್ಲಿ 95, ಹಾವೇರಿಯಲ್ಲಿ 7, ಕಲಬುರಗಿಯಲ್ಲಿ 32, ಕೊಡಗಿನಲ್ಲಿ 40 ಪ್ರಕರಣಗಳು ವರದಿಯಾಗಿವೆ.
ಕೋಲಾರದಲ್ಲಿ 21, ಕೊಪ್ಪಳದಲ್ಲಿ 2, ಮಂಡ್ಯದಲ್ಲಿ 111, ಮೈಸೂರಿನಲ್ಲಿ 135, ರಾಯಚೂರಿನಲ್ಲಿ 32, ರಾಮನಗರದಲ್ಲಿ 11, ಶಿವಮೊಗ್ಗದಲ್ಲಿ 40, ತುಮಕೂರಿನಲ್ಲಿ 46, ಉಡುಪಿಯಲ್ಲಿ 42, ಉತ್ತರಕನ್ನಡದಲ್ಲಿ 13, ವಿಜಯಪುರದಲ್ಲಿ 39, ಯಾದಗಿರಿಯಲ್ಲಿ 26 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


