ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಹಾಜರು ಹಿನ್ನೆಲೆ: ಬಿಗಿ ಪೊಲೀಸ್ ಭದ್ರತೆ

ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಿಬಿಐ ಕಸ್ಟಡಿ ಇಂದು ಅಂತ್ಯಗೊಳ್ಳಲಿದ್ದು, ವಿನಯ್ ಅವರನ್ನು ಅಧಿಕಾರಿಗಳು‌ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. 
ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿ
Updated on

ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಿಬಿಐ ಕಸ್ಟಡಿ ಇಂದು ಅಂತ್ಯಗೊಳ್ಳಲಿದ್ದು, ವಿನಯ್ ಅವರನ್ನು ಅಧಿಕಾರಿಗಳು‌ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. 

 ಸಿಬಿಐ ಅಧಿಕಾರಿಗಳು ಅವರನ್ನು ನ್ಯಾಯಾಲಯಕ್ಕೆ ಕರೆತರಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಾಟ್ಸ್ಆ್ಯಪ್, ಫೇಸ್ ಬುಕ್ನಲ್ಲಿ ಪೋಸ್ಟ್ ಹಾಕಿ ಹೆಚ್ಚಿನ ಸಂಖ್ಯೆಯಲ್ಲಿ ಕೋರ್ಟ್ ಆವರಣದಲ್ಲಿ ಹಾಜರಾಗುವಂತೆ ಬೆಂಬಲಿಗರಿಗೆ ಕರೆ ನೀಡಿದ್ದಾರೆ. 

ಆದ್ದರಿಂದ ಧಾರವಾಡದ ಜಿಲ್ಲಾ ನ್ಯಾಯಾಲಯದ ಬಳಿ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಸೇರುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com