ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಕೊಚ್ಚಿ ರೌಡಿಶೀಟರ್ ಭೀಕರ ಕೊಲೆ

ಹಾಡಹಗಲೇ ನಡುರಸ್ತೆಯಲ್ಲಿ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ ಮಾಡಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ ಮಾಡಲಾಗಿದೆ. 

ಕೊಲೆಯಾದ ರೌಡಿಶೀಟರ್ ಅನ್ನು 30 ವರ್ಷದ ಮಂಜುನಾಥ್ ಭಂಡಾರಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಬಸವನಗುಡಿ ಬಡಾವಣೆಯ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಂಜುನಾಥ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. 

ದಾಳಿಯಿಂದ ತೀವ್ರವಾಗಿ ಘಾಸಿಗೊಂಡಿದ್ದ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com