ಪರಿಷತ್ ಚುನಾವಣೆ ಮತ ಎಣಿಕೆ ಆರಂಭ: 40 ಅಭ್ಯರ್ಥಿಗಳ ಭವಿಷ್ಯ ಇಂದು ಬಹಿರಂಗ

ವಿಧಾನಪರಿಷತ್'ನ ನಾಲ್ಕು ಕ್ಷೇತ್ರಗಳಿಗೆ ಕಳೆದ ಅ.28ರಂದು ನಡೆದ ಚುನಾವಣೆಗೆ ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ಮತಎಣಿಕೆ ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ 40 ಅಭ್ಯರ್ಥಿಗಳ ಭವಿಷ್ಯ ಬಹಿರಂಗವಾಗಲಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಧಾನಪರಿಷತ್'ನ ನಾಲ್ಕು ಕ್ಷೇತ್ರಗಳಿಗೆ ಕಳೆದ ಅ.28ರಂದು ನಡೆದ ಚುನಾವಣೆಗೆ ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ಮತಎಣಿಕೆ ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ 40 ಅಭ್ಯರ್ಥಿಗಳ ಭವಿಷ್ಯ ಬಹಿರಂಗವಾಗಲಿದೆ. 

ಆಗ್ನೇಯ ಪದವೀಧರ, ಪಶ್ಚಿಮ ಪದವೀಧರ, ಈಶಾನ್ಯ ಶಿಕ್ಷಕರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ನ.2ರಂದು ಮತ ಎಣಿಕೆ ನಡೆಯಬೇಕಿತ್ತು. ಆದರೆ, ಚುನಾವಣಾ ಆಯೋಗವು ಕಾರಣಾಂತರಗಳಿಂದಾಗಿ ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಯ ಮತ ಎಣಿಕೆಯ ದಿನದಂದೇ ನಡೆಸಲು ತೀರ್ಮಾನಿಸಿದ್ದರಿಂದ ವಿಧಾನಪರಿಷತ್'ನ ನಾಲ್ಕು ಸ್ಥಾನಗಳ ಮತ ಎಣಿಕೆಯು ಉಪಚುನಾವಣೆಯ ದಿನವಾದ ಇಂದು ನಡೆಯುತ್ತಿದೆ. 

ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ. ಪದವೀಧರ ಕ್ಷೇತ್ರದ ಮತ ಎಣಿಕೆಯು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆಯು ಗುಲ್ಬರ್ಗ ವಿಶ್ವವಿದ್ಯಾಲಯದ ಗಣಿತ ವಿಭಾಗದಲ್ಲಿ ಜರುಗಲಿದೆ. ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಬೆಂಗಳೂರಿನ ಶಿಕ್ಷಕರ ಮತ ಕ್ಷೇತ್ರದ ಮತ ಎಣಿಕೆಯು ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಜರುಗಲಿದೆ. ಆಗ್ನೇಯ ಪದವೀಧದಕ ಕ್ಷೇತ್ರ-ಶೇ.75, ಪಶ್ಚಿಮ ಪದವೀಧರ ಕ್ಷೇತ್ರ ಶೇ.70.11, ಈಶಾನ್ಯ ಶಿಕ್ಷಕರ ಕ್ಷೇತ್ರ ಶೇ.73.22, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಶೇ.66ರಷ್ಟು ಮತದಾನವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com