ಮತಎಣಿಕೆ ಕೊಠಡಿಯಲ್ಲಿರುವ ಅಧಿಕಾರಿಗಳು
ಮತಎಣಿಕೆ ಕೊಠಡಿಯಲ್ಲಿರುವ ಅಧಿಕಾರಿಗಳು

ಕರ್ನಾಟಕ ಉಪಚುನಾವಣೆ: ಮತಎಣಿಕೆ ಪ್ರಕ್ರಿಯೆ ಆರಂಭ, ಮಧ್ಯಾಹ್ನ 12ರ ವೇಳೆಗೆ ಶಿರಾ, ರಾಜರಾಜೇಶ್ವರಿ ನಗರ ಭವಿಷ್ಯ ನಿರ್ಧಾರ

ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ನಡುವಿನ ಜಿದ್ದಾಜಿದ್ದಿ ಕಣವಾಗಿರುವ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. 
Published on

ಬೆಂಗಳೂರು: ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ನಡುವಿನ ಜಿದ್ದಾಜಿದ್ದಿ ಕಣವಾಗಿರುವ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. 

ಇಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನ 12 ಗಂಟೆ ವೇಳೆ ಎರಡು ಕ್ಷೇತ್ರಗಳ ಸ್ಪಷ್ಟಚಿತ್ರಣಗಳು ಲಭ್ಯವಾಗಲಿದೆ. 

ಬಿಜೆಪಿ, ಕಾಂಗ್ರೆಸ್, ಜೆಡಿಎಸ್'ನ ಅಭ್ಯರ್ಥಿಗಳು ಸೇರಿದಂತೆ 31 ಅಭ್ಯರ್ಥಿಗಳ ಭವಿಷ್ಯ ಮಧ್ಯಾಹ್ನದ ವೇಳೆ ಬಹಿರಂಗವಾಗಲಿದೆ. ಶಿರಾ ಕ್ಷೇತ್ರದಲ್ಲಿ ಒಟ್ಟು 15 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ಗೌಡ, ಟಿಬಿ ಜಯಚಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಅವರು ಪ್ರಮುಖವಾಗಿ ಅಖಾಡದಲ್ಲಿದ್ದಾರೆ. 

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಒಟ್ಟು 16 ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ಅಭ್ಯರ್ಥಿಗಳಿಗೆ ಮಾತ್ರವಲ್ಲದೇ, ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ಪ್ರತಿಷ್ಠೆಯಾಗಿದೆ. 

ಮತಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಶಿರಾ ಕ್ಷೇತ್ರದಲ್ಲಿ ಕೇಂದ್ರ ಶಸ್ತ್ರಾಸ್ತ್ರ ಪಡೆ, ಕೆಎಸ್ಆರ್'ಪಿ ತುಕಡಿ ಮತ್ತು ಹಿರಿಯ ಅಧಿಕಾರಿಗಳನ್ನೊಳಗೊಂಡಂತೆ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮೂವರು ಡಿಸಿಪಿ, 8 ಎಸಿಪಿ, 41 ಇನ್ಸ್'ಪೆಕ್ಟರ್, 105 ಪಿಎಸ್ಐ, 179 ಎಎಸ್ಐ, 183 ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ 1670 ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. 

ಉಪಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರು,  ಚುನಾವಣೆ ಫಲಿತಾಂಶ ದಿನ ಉತ್ತಮ ಆರಂಭ ಸಿಗುವ ವಿಶ್ವಾಸ ನನಗಿದೆ. ಜನರು ನಮ್ಮ ಕೈ ಬಿಡುವುದಿಲ್ಲ. ಪಕ್ಷದಲ್ಲಿ ಪ್ರತೀಯೊಬ್ಬರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಜನರು ಮತ ಹಾಕುವ ಮನಸ್ಸು ಮಾಡಿಲ್ಲ. ಸರ್ಕಾರದ ಮೇಲೆ ಜನರು ಬೇಸರಗೊಂಡಿರುವುದು ಇದರಿಂದ ತಿಳಿಯುತ್ತಿದೆ ಎಂದು ಹೇಳಿದ್ದಾರೆ. 

ಈ ನಡುವೆ ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಗೆಲುವು ಖಚಿತ ಎಂದು ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದೆ. ಗೆಲುವು ನಿಶ್ಚಿತ ಎಂಬ ವಿಶ್ವಾಸದಲ್ಲಿರುವ ಮುನಿರತ್ನ ಅವರು ಈಗಾಗಲೇ ಇಂಧನ ಖಾತೆಗಾಗಿ ಲಾಬಿ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com