ಬಿಸಿಯೂಟ ವಂಚಿತ ವಿದ್ಯಾರ್ಥಿಗಳಿಗೆ ಹೇಗೆ ಪರಿಹಾರ ಕಲ್ಪಿಸುತ್ತೀರಿ ವಿವರಿಸಿ: ಸರ್ಕಾರಕ್ಕೆ ಹೈಕೋರ್ಟ್

ರಾಜ್ಯದಲ್ಲಿ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಳಿಸಿದ ಸರ್ಕಾರದ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಳಿಸಿದ ಸರ್ಕಾರದ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

ಕೊರೋನಾ ಸೋಂಕು ತಡೆಯಲು ಲಾಕ್ಡೌನ್ ಘೋಷಿಸಿದ ಪರಿಣಾಮ ಸಾರ್ವಜನಿಕರಿಗೆ ಉಂಟಾದ ಅನಾನುಕೂಲತೆಗಳನ್ನು ಬಗೆಹರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು. 

ಈ ವೇಳೆ ಸರ್ಕಾರದ ನಡೆದೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ ವಿದ್ಯಾರ್ಥಿಗಳಿಗೆ ಆಹಾರ ಒದಗಿಸದಿದ್ದರೆ ಸಂವಿಧಾನ ನೀಡಿದ ಜೀವಿಸುವ ಹಕ್ಕು ಉಲ್ಲಂಘನೆಯಾಗಲಿದೆ ಎಂದು ಖಾರವಾಗಿ ನುಡಿಯಿತು. 

ಆಹಾರ ವಂಚಿತ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ, ಮಧ್ಯಾಹ್ನದ ಊಟ ಒದಗಿಸುವ ಬಗ್ಗೆ ಕ್ರಮ ಕೈಗೊಂಡು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಪ್ರಮಾಣಪತ್ರ ಸಲ್ಲಿಸಬೇಕು. ಯಾವ ಕಾರಣಕ್ಕೆ ಮಧ್ಯಾಹ್ನದ ಬಿಸಿಯೂಟ ಪೂರೈಕೆ ಸ್ಥಗಿತಗೊಳಿಸಲಾಯಿತು? ಆಹಾರ ವಂಚಿತ ವಿದ್ಯಾರ್ಥಿಗಳಿಗೆ ಹೇಗೆ ಪರಿಹಾರ ಕಲ್ಪಿಸಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಸಲ್ಲಿಸಬೇಕೆಂದು ಸೂಚಿಸಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿತು. 

ಜನೌಷಧಿ ಕೇಂದ್ರಗಳಲ್ಲಿ ರೂ.25ಕ್ಕೆ ಎನ್-95 ಮಾಸ್ಕ್'ಗಳು ಲಭ್ಯವಿದೆ ಎಂದು ವಿಚಾರಣೆ ವೇಳೆ ಕೇಂದ್ರ ಸರ್ಕಾರ ಮಾಹಿತಿ ನೀಡಿತು. 

ಜನ ಸಾಮಾನ್ಯರೆಲ್ಲರಿಗೂ ಮಾಸ್ಕ್ ದೊರೆಯುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com