ಹೊಸಗುಡ್ಡದಹಳ್ಳಿ ಬೆಂಕಿ ಅವಘಡ: ತನಿಖೆಗೆ ಸಚಿವ ಸುಧಾಕರ್ ಆದೇಶ, ಮಾಲೀಕನ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಭವಿಸಿದ್ದ ರೇಖಾ ಕೆಮಿಕಲ್ ಫ್ಯಾಕ್ಟರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬುಧವಾರದಂದು ಬೆಂಕಿ ಅವಘಡ ಸಂಭವಿಸಿದ್ದ ಸ್ಥಳಕ್ಕೆ ಇಂದು ಬೆಳಿಗ್ಗೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸುಧಾಕರ್
ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬುಧವಾರದಂದು ಬೆಂಕಿ ಅವಘಡ ಸಂಭವಿಸಿದ್ದ ಸ್ಥಳಕ್ಕೆ ಇಂದು ಬೆಳಿಗ್ಗೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸುಧಾಕರ್
Updated on

ಬೆಂಗಳೂರು: ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಭವಿಸಿದ್ದ ರೇಖಾ ಕೆಮಿಕಲ್ ಫ್ಯಾಕ್ಟರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ವಸತಿ ಪ್ರದೇಶದಲ್ಲಿ ಅನಧಿಕೃತವಾಗಿ ಸ್ಯಾನಿಟೈಸರ್ ಉತ್ಪಾದನೆ ಹಾಗೂ ಸಂಗ್ರಹ ಮಾಡಿರುವ ಆರೋಪ ಕೇಳಿ ಬಂದಿದೆ. ಸ್ಯಾನಿಟೈಸರ್ ತಯಾರಿಕೆ ಆರೋಗ್ಯ ಇಲಾಖೆ ವ್ಯಾಪ್ತಿಗೆ ಒಳಪಡುವುದರಿಂದ ಡ್ರಗ್ಸ್ ಕಂಟ್ರೋಲ್ ಬೋರ್ಡ್ ನಿಂದ ಅನುಮತಿ ಪಡೆಯಬೇಕು. ಒಂದು ವೇಳೆ ಅನುಮತಿ ಪಡೆಯದೆ ಸಂಗ್ರಹ ಹಾಗೂ ಉತ್ಪಾದನೆ ಮಾಡಿದ್ದರೆ ಅದು ಅಪರಾಧವಾಗುತ್ತದೆ. ಈ ಕಂಪನಿಯಿಂದ ತಯಾರಾದ ಸ್ಯಾನಿಟೈಸರ್ ಅನ್ನು ದೊಡ್ಡ ಪ್ರಮಾಣದಲ್ಲಿ ಯಾವುದಾದರೂ ಕಂಪನಿ ಖರೀದಿ ಮಾಡಿದ್ದರೆ ಅದೂ ಅಪರಾಧವಾಗುತ್ತದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಅವಘಡದಿಂದ ಉಂಟಾಗಿರುವ ಸಾರ್ವಜನಿಕರ ಆಸ್ತಿ-ಪಾಸ್ತಿ ನಷ್ಟವನ್ನು ಬಿಬಿಎಂಪಿ ಜಂಟಿ ಆಯುಕ್ತರು ಅಂದಾಜು ಮಾಡಿ ವರದಿ ಸಲ್ಲಿಸಿದ ನಂತರ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. 

ರೇಖಾ ಕೆಮಿಕಲ್ ಗೋದಾಮು ಮಾಲೀಕರ ವಿರುದ್ಧ ಮತ್ತೊಂದು ದೂರು
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮಾಲೀಕರ ವಿರುದ್ಧ ಮತ್ತೊಂದು ಎಫ್ಐ್ಆರ್ ದಾಖಲಾಗಿದೆ.

ಶಂಭುಲಿಂಗ ಎಂಬುವರು ರೇಖಾ ಕೆಮಿಕಲ್ಸ್ ವಿರುದ್ಧ ಸ್ಫೋಟಕ ನಿಯಂತ್ರಣ ಕಾಯ್ದೆಯಡಿ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ‌.ಐಪಿಸಿ ಸೆಕ್ಷನ್ 427, 338, 285 ಅಡಿ ಎಫ್ಐಟಆರ್ ದಾಖಲಾಗಿದೆ.

ತಾವು ಟೀ ಕುಡಿದು ಬರುವಷ್ಟರಲ್ಲಿ ತಮ್ಮ ಲಗೇಜ್ ಟೆಂಪೋಗೆ ಬೆಂಕಿ ಹೊತ್ತಿಕೊಂಡಿದ್ದು, ಇದೇ ರೀತಿ ಸ್ಥಳದಲ್ಲಿದ್ದ ಉಳಿದ ಐದು ಕಾರು ಹಾಗೂ ಎರಡು ಬೈಕ್ಗೆಳು ಸಹ ಬೆಂಕಿಗಾಹುತಿ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com