ರಾಜ್ಯದಲ್ಲಿ 24 ಗಂಟೆಯೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಣೆ- ಸಚಿವ ಡಾ. ಕೆ. ಸುಧಾಕರ್ 

ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ, ವೈದ್ಯಕೀಯ ಮತ್ತು ವೈದ್ಯಕೀಯ  ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. 
ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
Updated on

ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ, ವೈದ್ಯಕೀಯ ಮತ್ತು ವೈದ್ಯಕೀಯ  ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. 

ವಿಧಾನಸೌಧದಲ್ಲಿ ಮಾಜಿ ಆರೋಗ್ಯ ಸಚಿವರು,ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಹಾಗೂ ವೈದ್ಯ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2,300 ಕ್ಕೂ ಅಧಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. 30 ಸಾವಿರ ಜನರಿಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕೆಂಬ ನಿಯಮವಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಈ ನಿಯಮದಂತೆ ಆಸ್ಪತ್ರೆ ಇಲ್ಲ. ವಿಶ್ವಬ್ಯಾಂಕ್ ಸಹಕಾರದಿಂದ ಮೂರು ವರ್ಷಗಳಲ್ಲಿ ಇವುಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು, ಜೊತೆಗೆ ಈಗ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24 ಗಂಟೆಯೂ ಸೇವೆ ದೊರೆಯುವ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಆರಂಭವಾಗಿ ದೊಡ್ಡ ಆಸ್ಪತ್ರೆಗಳವರೆಗೂ ಗುಣಮಟ್ಟದಲ್ಲಿ ರಾಜಿಯಾಗದಂತೆ ಕ್ರಮ ಕೈಗೊಳ್ಳಬೇಕಿದೆ. ಇದಕ್ಕಾಗಿ ಸಮಗ್ರವಾದ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ.ಕೆಲ ವೈದ್ಯರು ಗ್ರಾಮೀಣ ಪ್ರದೇಶಗಳಿಗೆ ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಾರೆ. ಆರೋಗ್ಯ ಸಿಬ್ಬಂದಿ ಸೇವೆ ಸಲ್ಲಿಸುವ ಪ್ರದೇಶದ ಆಧಾರದಲ್ಲಿ ಬಡ್ತಿ, ವೇತನ, ಮಕ್ಕಳಿಗೆ ಶಿಕ್ಷಣ ನೀಡುವ ಅಂಶಗಳನ್ನು ಈ ಹೊಸ ನೀತಿಯಲ್ಲಿ ಸೇರಿಸಲಾಗುವುದು ಎಂದು ವಿವರಿಸಿದರು.

1,250 ಎಂಬಿಬಿಎಸ್ ವೈದ್ಯರು, 950 ತಜ್ಞರು, 150 ದಂತ ವೈದ್ಯರು ಸೇರಿ 2,500 ವೈದ್ಯರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ಜೊತೆಗೆ 1,500 ಹಿರಿಯ ರೆಸಿಡೆಂಟ್ ವೈದ್ಯರನ್ನು ನೇಮಿಸಲಾಗುವುದು. ಡಿಸೆಂಬರ್  ಅಥವಾ ಜನವರಿ ವೇಳೆಗೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳಲ್ಲಿ ಹುದ್ದೆಗಳು ಭರ್ತಿಯಾಗಲಿದೆ. ಅರೆ ವೈದ್ಯಕೀಯ, ನರ್ಸಿಂಗ್ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ತರಲಾಗುವುದು ಎಂದರು.

ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಉದ್ದೇಶವಿದ್ದು, ಅದಕ್ಕೆ ತಕ್ಕಂತೆ ನೀತಿಯಲ್ಲಿ ಬದಲಾವಣೆ ತರಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com