ಚಾಮರಾಜನಗರ: ಬೊಲೆರೋ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಮೂವರ ದುರ್ಮರಣ

ಕೊಳ್ಳೇಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಬೊಲೆರೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಪರಿಣಾಮ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ.
ಅಪಘಾತ
ಅಪಘಾತ
Updated on

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಬೊಲೆರೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಪರಿಣಾಮ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ. 

ಮೃತ ದುರ್ದೈವಿಗಳನ್ನು ಪಳನಿಮೇಡು ಗ್ರಾಮದ ಡೇವಿಡ್, ಶೇಷರಾಜು ಹಾಗೂ ಶೆಟು ಎಂದು ಗುರುತಿಸಲಾಗಿದೆ. ಮೂವರು ಬೈಕ್ ನಲ್ಲಿ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. 

ಬೊಲೆರೋ ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸ್ಥಳಕ್ಕೆ ಡಿವೈಎಸ್ ಸೇರಿದಂತೆ ಸರ್ಕಲ್ ಇನ್ ಸ್ಪೆಕ್ಟರ್, ಗ್ರಾಮಾಂತರ ಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಅಪಘಾತ ಪ್ರಕರಣ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com