30 ತಿಂಗಳಲ್ಲಿ ಚಿತ್ರದುರ್ಗ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಪೂರ್ಣ: ಸಚಿವ ಸುಧಾಕರ್

30 ತಿಂಗಳುಗಳಲ್ಲಿ ಚಿತ್ರದುರ್ಗ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದಾರೆ. 
ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸುತ್ತಿರುವ ಸಚಿವ ಸುಧಾಕರ್
ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸುತ್ತಿರುವ ಸಚಿವ ಸುಧಾಕರ್

ಚಿತ್ರದುರ್ಗ: 30 ತಿಂಗಳುಗಳಲ್ಲಿ ಚಿತ್ರದುರ್ಗ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದಾರೆ. 

ಚಿತ್ರದುರ್ಗ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿರುವ ಸುಧಾಕರ್ ಅವರು, ಕಾಲೇಜು ಸ್ಥಾಪನೆಗೆ ಅಗತ್ಯ ಸ್ಥಳ ವೀಕ್ಷಣೆ ಮಾಡಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ನಿರ್ಮಾಣಗೊಳ್ಳಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ವಾರದೊಳಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು. ಕಾಲೇಜು ಸ್ಥಾಪನೆಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೂ.50 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಚಿತ್ರದುರ್ಗ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಕನಿಷ್ಠ ರೂ.500 ಕೋಟಿ ಬೇಕಾಗಲಿದೆ. ಸಂಪೂರ್ಣ ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಇದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ರಾಜ್ಯ ಸರ್ಕಾರದ ಅನುದಾನದ ಜೊತೆಗೆ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿ 3ನೇ ಒಂದು ಭಾಗ ಹಣ ಸಹ ಕಾಲೇಜು ನಿರ್ಮಾಣಕ್ಕೆ ಬಳಕೆ ಮಾಡಲಾಗುತ್ತಿದೆ. 

2021-2022ನೇ ಸಾಲಿಗೆ ಕಾಲೇಜಿನಲ್ಲಿ ಕೋರ್ಸ್ ಆರಂಭಿಸುವ ಗುರಿ ಹೊಂದಲಾಗಿದೆ. 30 ತಿಂಗಳುಗಳಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಹೇಳಿದ್ದಾರೆ. 

ಸರ್ಕಾರಿ ವೈದ್ಯಕೀಯ ಕಾಲೇಜು ಜೊತೆಗೆ ಇದಕ್ಕೆ ಪೂರಕವಾಗಿ ಪ್ಯಾರಾ ಮೆಡಿಕಲ್, ನರ್ಸಿಂಗ್ ಕೋರ್ಸ್'ಗಳು ಸೇರಿ ವಿವಿಧ ವೈದ್ಯಕೀಯ ಕೋರ್ಸ್'ಗಳು ಇಲ್ಲಿ ಪ್ರಾರಂಭವಾಗಲಿವೆ. ಮೆಡಿಕಲ್ ಕಾಲೇಜಿಗೆ ಕನಿಷ್ಠ 700 ಹಾಸಿಗೆ ಸೌಲಭ್ಯವಿರಬೇಕು. ಈಗಾಗಲೇ 450 ಹಾಸಿಗೆಗಳು ಆಸ್ಪತ್ರೆಯ ಸೌಲಭ್ಯವಿದೆ. ಇದು ಮುಂದಿನ ದಿನಗಳಲ್ಲಿ ವೈದ್ಯಕೀಯ ಕಾಲೇಜಿನೊಂದಿಗೆ 700 ಹಾಸಿಗೆ ಆಸ್ಪತ್ರೆಯಾಗಿ ಪರಿವರ್ತನೆಯಾಗಲಿದೆ ಎಲ್ಲಾ ಜಿಲ್ಲೆಗಳಲ್ಲಿಯೂ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣದ ಗುರಿ ಇದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com