ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬಡವರಿಗಾಗಿ 20 ಮನೆ ನಿರ್ಮಾಣ: ವಸತಿ ಸಚಿವ ವಿ.ಸೋಮಣ್ಣ

ಉಪಚುನಾವಣೆ ಬಳಿಕ ಪಂಚಾಯತ್ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬಡವರಿಗಾಗಿ ತಲಾ 20 ಮನೆಗಳನ್ನು ನಿರ್ಮಿಸಿಕೊಡಲು ಮುಂದಾಗಿದೆ. 
ವಸತಿ ಸಚಿವ ಸೋಮಣ್ಣ
ವಸತಿ ಸಚಿವ ಸೋಮಣ್ಣ

ಬೆಂಗಳೂರು: ಉಪಚುನಾವಣೆ ಬಳಿಕ ಪಂಚಾಯತ್ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬಡವರಿಗಾಗಿ ತಲಾ 20 ಮನೆಗಳನ್ನು ನಿರ್ಮಿಸಿಕೊಡಲು ಮುಂದಾಗಿದೆ. 

ಕೆಆರ್'ಎಸ್ ನಿಸರ್ಗ ಬಡಾವಣೆಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ವಸತಿ ಸಚಿವ ಸೋಮಣ್ಣ ಅವರು, ಅಂಬೇಡ್ಕರ್ ಮತ್ತು ಬಸವ ವಸತಿ ಕಾರ್ಯಕ್ರಮಗಳ ಅಡಿಯಲ್ಲಿ ಆಶ್ರಯ ರಹಿತರಿಗೆ ವಸತಿ ಒದಗಿಸಬೇಕೆಂಬ ಪ್ರಧಾನಿ ನರೇಂದ್ರ ಮೋದಿಯವರ ಆಶಯವನ್ನು ಈಡೇರಿಸುವ ಸಲುವಾಗಿ ರಾಜ್ಯ ಸರ್ಕಾರವು ಪಂಚಾಯಿತಿ ಮಿತಿಯಲ್ಲಿ ಸುಮಾರು 1.69 ಲಕ್ಷ ಮನೆಗಳನ್ನು ನಿರ್ಮಿಸಲಿದೆ ಎಂದು ಹೇಳಿದ್ದಾರೆ. 

ಈಗಾಗಲೇ 1.17 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗಿದ್ದು, ಕ್ಷೇತ್ರ ಅಭಿವೃದ್ಧಿಗೆ ರೂ.200 ಕೋಟಿ ಮೀಸಲಿಡಲಾಗಿದೆ. ಇನ್ನುಳಿದ ಮನೆಗಳ ನಿರ್ಮಾಣಕ್ಕೆ ಭೂಮಿಯನ್ನೂ ಹುಡುಕಲಾಗಿದೆ. ನಿರಾಶ್ರಿತರಿಂದ ಹೆಚ್ಚಿನ ಬೇಡಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ಮೈಸೂರು, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ 69,000 ಮನೆಗಳನ್ನು ನಿರ್ಮಿಸಲು ಸರ್ಕಾರ ನಿರ್ಧರಿಸಿದೆ. ಈ ನಡುವೆ ರಾಜೀವ್ ಗಾಂಧಿ ವಸತಿ ನಿಗಮವು ರೂ.10,100 ಕೋಟಿಗಳಲ್ಲಿ 1.2 ಲಕ್ಷ ಮನೆಗಳನ್ನು ನಿರ್ಮಿಸಲು ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com