ಡಿಸೆಂಬರ್ 1 ರಿಂದ ದಂತ, ವೈದ್ಯಕೀಯ ಕಾಲೇಜು ಆರಂಭಕ್ಕೆ ಸರ್ಕಾರ ನಿರ್ಧಾರ

ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ಈ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆಂದು ಹೇಳಿದ್ದಾರೆ. 

ನವೆಂಬರ್ 17 ರಿಂದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಈ ಹಿಂದೆ ಉಪ ಮುಖ್ಯಮಂತ್ರಿ ಸಿಎನ್ ಅಶ್ವತ್ ನಾರಾಯಣ್ ತಿಳಿಸಿದ್ದರು. ಈ ನಿರ್ಧಾರದ ಬೆನ್ನಲ್ಲೇ ಇದೀಗ ದಂತ, ವೈದ್ಯಕೀಯ ಕಾಲೇಜು ಆರಂಭಕ್ಕೆ ಸರ್ಕಾರ ನಿರ್ಧರಿಸಿದೆ. 

ಕಾಲೇಜುಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡುವುದೋ ಅಥವಾ ಆನ್'ಲೈನ್ ಕ್ಲಾಸ್ ಗಳನ್ನೇ ಮುಂದುವರೆಸುವ ಎರಡೂ ಆಯ್ಕೆಯನ್ನು ವಿದ್ಯಾರ್ಥಿಗಳಿಗೇ ನೀಡಲಾಗಿದೆ. ಪ್ರಾಕ್ಟಿಕಲ್ ಕ್ಲಾಸ್'ಗಳಿಗೆ ವಿದ್ಯಾರ್ಥಿಗಳು ನೇರವಾಗಿ ಕಾಲೇಜುಗಳಿಗೆ ಹಾಜರಾಗುವುದು ಕಡ್ಡಾಯ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com