ರಾಜ್ಯ
ಮೈಸೂರು: ದೀಪಾವಳಿಯ ದಿನವೇ ಪತ್ನಿಯನ್ನು ಕೊಂದು ಸೀಮೆಎಣ್ಣೆ ಸುರಿದು ಸುಟ್ಟುಹಾಕಿದ ಪತಿರಾಯ!
ದೀಪಾವಳಿ ಹಬ್ಬದಂದೇ ಪತ್ನಿಯನ್ನು ಕೊಂದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಅಮಾನುಷ ಘಟನೆ ಮೈಸೂರಿನ ಟಿ. ನರಸೀಪುರದಲ್ಲಿ ನಡೆದಿದೆ.
ಮೈಸೂರು: ದೀಪಾವಳಿ ಹಬ್ಬದಂದೇ ಪತ್ನಿಯನ್ನು ಕೊಂದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಅಮಾನುಷ ಘಟನೆ ಮೈಸೂರಿನ ಟಿ. ನರಸೀಪುರದಲ್ಲಿ ನಡೆದಿದೆ.
ಟಿ, ನರಸೀಪುರದ ದೊಡ್ಡಮುಲಗೂಡು ಗ್ರಾಮದ ರಮೇಶ್(30) ಹೀಗೆ ಪತ್ನಿಯ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿ. ಈತ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದ ಪತ್ನಿ ಶಾಂತಮ್ಮ(22) ಪತಿಯಿಂದ ಸಾವನ್ನಪ್ಪಿರುವ ದುರ್ದೈವಿ.
ಪಂಚಾಯತ್ ಚುನಾವಣೆಗೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ರಮೇಶ್ ಪತ್ನಿಯನ್ನು ಕೊಲೆ ಮಾಡಿದ್ದಾಗಿ ತಿಳಿದುಬಂದಿದೆ.
ಆರೋಪಿ ರಮೇಶ್ ಕೃತ್ಯದ ನಂತರ ತಲೆ ಮರೆಸಿಕೊಂಡಿದ್ದು ಆತನ ಪತ್ತೆಗೆ ಪೋಲೀಸರು ಶೋಧಕಾರ್ಯ ನಡೆಸಿದ್ದಾರೆ.
ಘಟನೆ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.